ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಸಚಿವ ಜಗದೀಶ್ ಶೆಟ್ಟರ್!
ಹುಬ್ಬಳ್ಳಿ: ರೈಲ್ವೆ ಕಾಮಗಾರಿ ವೀಕ್ಷಿಸಲು ಬಂದಿದ್ದ ಸಚಿವ ಜಗದೀಶ್ ಶೆಟ್ಟರ್ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ದೇಶಪಾಂಡೆ ನಗರದಲ್ಲಿ ಶನಿವಾರ ಸಂಭವಿಸಿದೆ.
ದೇಶಪಾಂಡೆ ನಗರ ಹಾಗೂ ಭವಾನಿನಗರ ಮಧ್ಯೆ ಸಂಪರ್ಕ ಕಲ್ಪಿಸಲು ಕೃಷ್ಣಮಂದಿರ ಬಳಿ ರೈಲ್ವೆ ಕೆಳಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದನ್ನು ವೀಕ್ಷಿಸಲು ಜಗದೀಶ್ ಶೆಟ್ಟರ್ ಮತ್ತು ಅಧಿಕಾರಿಗಳ ತಂಡ ಆಗಮಿಸಿತ್ತು.
ಕಾಮಗಾರಿ ವೀಕ್ಷಣೆ ಮಾಡುವ ಸಮಯದಲ್ಲಿ ಕೆಳಸೇತುವೆ ಪಕ್ಕದಲ್ಲಿ ಭಾರಿ ಪ್ರಮಾಣದ ಮಣ್ಣಿನ ದಿಬ್ಬ ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಜಗದೀಶ್ ಶೆಟ್ಟರ್ ಮತ್ತು ಬಿಜೆಪಿ ನಾಯಕರು ಹಾಗೂ ಅಧಿಕಾರಿಗಳು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
0 التعليقات: