ಎನ್ ಡಿಎ ಮಿತ್ರಪಕ್ಷ ಸೇರಲು ಜೆಡಿಎಸ್ ಸಿದ್ಧತೆ? ಹೆಚ್.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಸ್ಥಾನ?
ಬೆಂಗಳೂರು : ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ ಜೊತೆ ಕೈಜೋಡಿಸಿ ಎನ್ ಡಿಎ ಮಿತ್ರಪಕ್ಷ ಆಗಲು ಜೆಡಿಎಸ್ ನಿರ್ಧರಿಸಿದೆ ಎನ್ನಲಾಗಿದ್ದು, ಈ ಸಂಬಂಧ ಶೀಘ್ರವೇ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಎನ್ ಡಿಎ ಜೊತೆ ಸೇರಿಸಲಿದ್ದಾರೆಂದು ಜೆಡಿಎಸ್ ನ ಉನ್ನತ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಹಣೆಯುವ ಉದ್ದೇಶದಿಂದ ಬಿಜೆಪಿ ಜೊತೆ ಕೈಜೋಡಿಸಿ ಎನ್ ಡಿಎ ಮಿತ್ರಪಕ್ಷ ಸೇರಲು ಜೆಡಿಎಸ್ ಚಿಂತನೆ ನಡೆಸಿದೆ ಎನ್ನಲಾಗಿದೆ.
ಇನ್ನು ಮುಂದಿನ ವರ್ಷ ಜೂನ್ ನಲ್ಲಿ ನಾಲ್ವರು ರಾಜ್ಯಸಭಾ ಸದಸ್ಯರು ನಿವೃತ್ತರಾಗಲಿದ್ದು, ಒಂದು ಸ್ಥಾನ ಜೆಡಿಎಸ್ ಸುಲಭವಾಗಲಿ ಗೆಲ್ಲಲಿದೆ. ಆ ಸ್ಥಾನಕ್ಕೆ ಕುಮಾರಸ್ವಾಮಿ ಅವರನ್ನೇ ನಿಲ್ಲಿಸಿ ಕೇಂದ್ರದಲ್ಲಿ ಸಚಿವರನ್ನಾಗಿ ಮಾಡುವ ಚರ್ಚೆಯೂ ನಡೆದಿದೆ ಎನ್ನಲಾಗಿದೆ.
0 التعليقات: