Thursday, 14 January 2021

ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬೇಡಿ : ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಹತ್ವದ ಸೂಚನೆ


ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬೇಡಿ : ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದಿಂದ ಮಹತ್ವದ ಸೂಚನೆ

ನವದೆಹಲಿ : ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ವಿರುದ್ಧ ನಿರ್ಣಾಯಕ ಹೋರಾಟಕ್ಕೆ ಭಾರತ ಅಣಿಯಾಗಿದ್ದು, ನಾಳೆಯಿಂದ ಲಸಿಕೆ ವಿತರಣೆ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ನಡುವೆ ಗರ್ಭಿಣಿಯರು, ಹಾಲುಣಿಸುವ ಬಾಣಂತಿಯರನ್ನು ಕೋವಿಡ್ 19 ಲಸಿಕೆ ಪ್ರಯೋಗಕ್ಕೆ ಒಳಪಡಿಸದ ಕಾರಣ ಸದ್ಯ ಅವರಿಗೆ ಲಸಿಕೆ ನೀಡಬಾರದು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಗಳಿಗೆ ಸೂಚನೆ ನೀಡಿದೆ.

ಈ ಕುರಿತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯವು, ಗರ್ಭಿಣಿಯರು, ಹಾಲುಣಿಸುವ ಬಾಣಂತಿಯರಿಗೆ ಕೊರೊನಾ ಲಸಿಕೆ ನೀಡಬಾರದು, ತುರ್ತು ಸಂದರ್ಭಗಳಲ್ಲಿ 18 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ವಯೋಮಾನದವರಿಗೆ ಲಸಿಕೆ ನೀಡಬೇಕು. ಅಗತ್ಯವಿದ್ದಲ್ಲಿ ಕೋವಿಡ್ 19 ಹಾಗೂ ಇತರ ಲಸಿಕೆಗಳನ್ನು ನಡುವೆ 14 ದಿನ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಿದೆ.SHARE THIS

Author:

0 التعليقات: