Wednesday, 6 January 2021

ಕಾಂಗ್ರೆಸ್ ಗೆ ಬಿಗ್ ಶಾಕ್ : ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರ್ಪಡೆ ಖಚಿತ


ಕಾಂಗ್ರೆಸ್ ಗೆ ಬಿಗ್ ಶಾಕ್ : ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರ್ಪಡೆ ಖಚಿತ

ಬೆಂಗಳೂರು : ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಕಾಂಗ್ರೆಸ್ ನಾಯಕ, ಹಾಲಿ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ಜೆಡಿಎಸ್ ಪಕ್ಷ ಸೇರುವುದಾಗಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಜೆಡಿಎಸ್ ಸೇರಲು ತೀರ್ಮಾನಿಸಿದ್ದೇನೆ. ಅಲ್ಲದೇ ರಾಷ್ಟ್ರಮಟ್ಟದಲ್ಲಿ ಜನತಾ ಪರಿವಾರವನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತೇನೆ. ಈ ಸಂಬಂಧ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರೊಂದಿಗೆ ಚರ್ಚಿಸಲಿದ್ದೇನೆ ಎಂದು ಹೇಳಿದ್ದಾರೆ.

ಇನ್ನು ಸ್ವಾರ್ಥಕ್ಕಾಗಿ ನಾನು ಜೆಡಿಎಸ್ ಪಕ್ಷ ಸೇರುತ್ತಿಲ್ಲ, ಜನತಾ ಪರಿವಾರವನ್ನು ಒಗ್ಗೂಡಿಸುವ ಚಿಂತನೆ ಹೊಂದಿದ್ದು, ಹೀಗಾಗಿ ಜೆಡಿಎಸ್ ಪಕ್ಷ ಸೇರ್ಪಡೆಯಾಗುತ್ತೇನೆ ಎಂದು ಹೇಳಿದ್ದಾರೆ.SHARE THIS

Author:

0 التعليقات: