Wednesday, 6 January 2021

ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ


ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ

ಬೆಂಗಳೂರು : ವಾಹನ ಸವಾರರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಇಂದು ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ.

ಇಂದು ಪೆಟ್ರೋಲ್ ಬೆಲೆಯಲ್ಲಿ 26 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆಯಲ್ಲಿ 25 ಪೈಸೆ ಏರಿಕೆಯಾಗಿದೆ. ಈ ಮೂಲಕ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 83.97 ರೂ. ತಲುಪಿದೆ. ಡೀಸೆಲ್ ಬೆಲೆ 74.12 ರೂ. ಗೆ ಮಾರಾಟವಾಗಿದೆ.

ಕಳೆದ 29 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ ಕಾಣದೆ ಸ್ಥಿರತೆ ಕಾಯ್ದುಕೊಂಡಿದ್ದು, ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸುವಂತಾಗಿದೆ.
SHARE THIS

Author:

0 التعليقات: