ರಿಷಭ್ ಪಂತ್ಗೆ ಗಾಯ; ಬದಲಿ ಆಟಗಾರ ವೃದ್ಧಿಮಾನ್ ಸಹಾ ವಿಕೆಟ್ ಕೀಪರ್!
ಸಿಡ್ನಿ: ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ತೃತೀಯ ದಿನದಾಟದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ವೇಳೆ ಎಡ ಮೊಣಕೈಗೆ ಗಾಯ ಮಾಡಿಕೊಂಡಿರುವ ಭಾರತೀಯ ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರನ್ನು ಹೆಚ್ಚುವರಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.
ಆಸ್ಟ್ರೇಲಿಯಾ ವೇಗದ ಬೌಲರ್ ಪ್ಯಾಟ್ ಕಮಿನ್ಸ್ ದಾಳಿಯಲ್ಲಿ ಗಾಯ ಮಾಡಿಕೊಂಡಿರುವ ಪಂತ್ ಅವರನ್ನು ಸ್ಕ್ಯಾನ್ ಮಾಡಲು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಬಿಸಿಸಿಐ ಟ್ವೀಟ್ ಮೂಲಕ ತಿಳಿಸಿದೆ.
ಐದನೇ ವಿಕೆಟ್ಗೆ ಚೇತೇಶ್ವರ ಪೂಜಾರ ಜೊತೆಗೆ 53 ರನ್ಗಳ ಜೊತೆಯಾಟದಲ್ಲಿ ಭಾಗಿಯಾಗಿರುವ ರಿಷಭ್ ಪಂತ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದರು. ಬಳಿಕ 36 ರನ್ ಗಳಿಸಿದ್ದ ಪಂತ್, ಜೋಶ್ ಹ್ಯಾಜಲ್ವುಡ್ ದಾಳಿಯಲ್ಲಿ ಡೇವಿಡ್ ವಾರ್ನರ್ಗೆ ಕ್ಯಾಚಿತ್ತು ನಿರ್ಗಮಿಸಿದ್ದರು.
0 التعليقات: