ಶಾಲೆ ಆರಂಭದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಬಿಗ್ ಶಾಕ್!
ಹಾವೇರಿ : ರಾಜ್ಯದಲ್ಲಿ ಶಾಲೆ ಆರಂಭದ ಬೆನ್ನಲ್ಲೇ ಮತ್ತೆ ಕೊರೊನಾದ ಆತಂಕ ಎದುರಾಗಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ಇಬ್ಬರು ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಇಬ್ಬರು ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಎರಡು ಶಾಲೆಗಳನ್ನು ಬಂದ್ ಮಾಡಲಾಗಿದೆ. ಶಿಕ್ಷಕರನ್ನು ಹೋಮ್ ಐಸೋಲೇಷನ್ ನಲ್ಲಿಡಲಾಗಿದೆ.
ರಾಣೆಬೆನ್ನೂರು ತಾಲೂಕಿನ ಒಂದು ಸರ್ಕಾರಿ ಶಾಲೆ ಹಾಗೂ ಒಂದು ಖಾಸಗಿ ಶಾಲೆ ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 23 ಮಕ್ಕಳಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗುತ್ತಿದೆ. ಈ ಮೂಲಕ ಶಾಲೆ ಆರಂಭವಾದ ಬೆನ್ನಲ್ಲೇ ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಕ್ಕಳಲ್ಲಿ, ಪೋಷಕರಿಗೆ ಆತಂಕ ಎದುರಾಗಿದೆ.
0 التعليقات: