ಎರಡು ದಿನದಲ್ಲಿ ಸಚಿವರಿಗೆ ಖಾತೆಗಳ ಹಂಚಿಕೆ : ಸಿಎಂ ಯಡಿಯೂರಪ್ಪ
ಡಿಜಿಟಲ್ ಡೆಸ್ಕ್ : ಮುಂದಿನ ಎರಡು ದಿನಗಳಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಚಿವರಿಗೆ ಖಾತೆಗಳ ಹಂಚಿಕೆ ನೀಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಕುಂದಾಪುರ ತಾಲೂಕು ಕುಂಭಾಶಿಯ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನ ದಲ್ಲಿ ಮಂಗಳವಾರ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಎರಡು ದಿನದಲ್ಲಿ ಖಾತೆ ಹಂಚಿಕೆ ಮಾಡುತ್ತೇನೆ. ಶೀಘ್ರವೇ ವಿಧಾನ ಮಂಡಲ ಅಧಿವೇಶನ ಶುರುವಾಗುತ್ತದೆ ಎಂದು ಹೇಳಿದರು. ಕಳೆದೆರಡು ದಿನದಿಂದ ಉಡುಪಿಯಲ್ಲಿ ಧಾರ್ಮಿಕ ಪ್ರವಾಸ ಮಾಡಿದ್ದೇನೆ. ಸಕಾಲಕ್ಕೆ ಮಳೆ ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ರಾಜ್ಯಕ್ಕೆ ಸಮೃದ್ಧಿಯಾಗಲಿ ಎಂದು ಬೇಡಿಕೊಂಡಿದ್ದೇನೆ ಎಂದರು. ರೇಣುಕಾಚಾರ್ಯರ ಅಸಮಾಧಾನದ ಕುರಿತು ಮಾತನಾಡಿದ ಯಡಿಯೂರಪ್ಪ, ಶಾಸಕ ರೇಣುಕಾಚಾರ್ಯ ಜೊತೆ ಮಾತನಾಡಿದ್ದೇನೆ. ಯಾವುದೇ ಗೊಂದಲದ ವಾತಾವರಣ ಇಲ್ಲ. ಇಂದು ಬೆಂಗಳೂರಿನಲ್ಲಿ ರೇಣುಕಾಚಾರ್ಯ ನನ್ನನ್ನು ಭೇಟಿ ಮಾಡುತ್ತಾರೆ ಎಂದವರು ನುಡಿದರು.
0 التعليقات: