Saturday, 23 January 2021

ಈ ಬಾರಿ ಸರಳ ಗಣರಾಜ್ಯೋತ್ಸವ : ಸಾರ್ವಜನಿಕ ಪ್ರವೇಶವಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮವಿಲ್ಲ


 ಈ ಬಾರಿ ಸರಳ ಗಣರಾಜ್ಯೋತ್ಸವ : ಸಾರ್ವಜನಿಕ ಪ್ರವೇಶವಿಲ್ಲ, ಸಾಂಸ್ಕೃತಿಕ ಕಾರ್ಯಕ್ರಮವಿಲ್ಲ

ಬೆಂಗಳೂರು,ಜ.24 - ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಗಣರಾಜ್ಯೋತ್ಸವ ಸರಳವಾಗಿ ಆಚರಿಸಲಾಗುವುದು. ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದರು.

72ನೇ ಗಣರಾಜ್ಯೋತ್ಸವದ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳ ಪೂರ್ವಭಾವಿ ಸಿದ್ದತೆಗಳ ಬಗ್ಗೆ ಬೆಂಗಳೂರು ನಗರ ಜಿಲ್ಲಾಕಾರಿ ಜಿ.ಎನ್.ಶಿವಮೂರ್ತಿ, ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರೊಂದಿಗೆ ಪರಿಶೀಲನೆ ನಡೆಸಿದ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಗಣರಾಜ್ಯೋತ್ಸವವು ರಾಜ್ಯಪಾಲರ ಭಾಷಣ, ಗೌರವ ವಂದನೆ ಸ್ವೀಕಾರ ಸೇರಿದಂತೆ ಕೇವಲ 40 ನಿಮಿಷಗಳು ಮಾತ್ರ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು. ಗೌರವ ರಕ್ಷೆ ಸ್ವೀಕರಿಸಲು ಕೆಎಸ್‍ಆರ್‍ಪಿ, ಸಿಆರ್‍ಪಿಎಫ್, ಬಿಎಸ್‍ಎಫ್ , ಸಿಎಆರ್, ಕೆ.ಎಸ್.ಐ.ಎಸ್‍ಎಫ್, ಟ್ರಾಫಿಕ್ ಪೊಲೀಸ್, ಮಹಿಳಾ ಪೊಲೀಸ್ ಸೇರಿದಂತೆ 21 ತುಕಡಿಗಳಲ್ಲಿ 750 ಮಂದಿ ಭಾಗವಹಿಸಲಿದ್ದಾರೆ.

ಗಣರಾಜ್ಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಆಗಮಿಸುವ ಗಣ್ಯ ಮತ್ತು ಇತರೆ ಆಹ್ವಾನಿತರಿಗೆ 500 ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕ ಪ್ರವೇಶವನ್ನು ಸಂಪೂರ್ಣ ನಿಷೇಸಲಾಗಿದೆ. ಕಾರ್ಯಕ್ರಮದ ನೇರ ಪ್ರಸಾರವನ್ನು ದೂರದರ್ಶನ ಹಾಗೂ ವೆಬ್‍ಕಾಸ್ಟ್ ಮೂಲಕ ಪ್ರಸಾರ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಆಹ್ವಾನಿತರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚಿಸಲಾಗಿದೆ ಎಂದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ, ಗಣರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಿಬಿಎಂಪಿ, ವಾರ್ತಾ ಇಲಾಖೆ, ಮಿಲಿಟರಿ ಇಲಾಖೆ ಹಾಗೂ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಸಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದರು.

ಬಂದೋಬಸ್ತ್‍ಗಾಗಿ 7 ಡಿಸಿಪಿ , 16 ಎಸಿಪಿ, ಸೇರಿದಂತೆ 1100 ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. 12 ಕೆಎಸ್‍ಆರ್‍ಪಿ, 9 ಸಿಎಆರ್ ತುಕಡಿ, ಬಾಂಬ್ ಸ್ಕ್ವಾಡ್, ಹೋಮ್‍ಗಾಡ್ರ್ಸ್, ಟ್ರಾಫಿಕ್ ವಾರ್ಡನ್ ಸೇರಿದಂತೆ ಅಕಾರಿಗಳು ಮತ್ತು ಸಿಬ್ಬಂದಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ವಾಹನಗಳು, ಆಯಂಬುಲೆನ್ಸ್ ವಾಹನಗಳು, ಕ್ಷಿಪ್ರ ಕಾರ್ಯಪಡೆ, ಡಿ-ಸ್ವಾಟ್ ಮತ್ತು ಆರ್‍ಐವಿಗಳನ್ನು ಬಂದೋಬಸ್ತ್‍ಗೆ ನಿಯೋಜಿಸಲಾಗಿರುತ್ತದೆ. ಗರುಡಾ ಪಡೆಯನ್ನು ಕೂಡ ಸನ್ನದ್ದ ಸ್ಥಿತಿಯಲ್ಲಿಡಲಾಗಿದೆ.

ಪರೇಡ್ ಮೈದಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎಲ್ಲ ಘಟನೆಗಳನ್ನು ಸೂಕ್ಷ್ಮವಾಗಿ ನಿಗಾವಹಿಸಲು ಆಯಾಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಮತ್ತು ಬಾಗೇಜ್ ಸ್ಕ್ಯಾನರ್‍ಗಳನ್ನು ಅಳವಡಿಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರು, ಅತಿ ಗಣ್ಯ ವ್ಯಕ್ತಿಗಳು, ಮಿಲಟರಿ, ಬಿಎಸ್‍ಎಫ್ ಸೇರಿ ಹಿರಿಯ ಅಕಾರಿಗಳು, ಮಾಧ್ಯಮದವರು ಒಳಗೊಂಡಂತೆ ವಿತರಿಸಲಾಗಿರುವ ಪಾಸ್ ಹೊಂದಿದ 500 ಮಂದಿಗೆ ಮಾತ್ರ ಸೀಮಿತಗೊಳಿಸಲಾಗಿದೆ.

ನಿಷೇಧ: ಪರೇಡ್ ಮೈದಾನಕ್ಕೆ ಬರುವವರು ಯಾವುದೇ ಅನಗತ್ಯ ಲಗೇಜ್‍ಗಳನ್ನು ತರುವಂತಿಲ್ಲ. ಅನುಮಾನಾಸ್ಪದ ವಸ್ತು, ವ್ಯಕ್ತಿಗಳು ಕಂಡುಬಂದಲ್ಲಿ ಸಮವಸ್ತ್ರದಲ್ಲಿರುವ ಪೊಲೀಸ್ ಅಕಾರಿಗಳಿಗೆ ಮಾಹಿತಿ ನೀಡಬೇಕು. ಸಿಗರೇಟ್, ಬೆಂಕಿಪೆಟ್ಟಿಗೆ, ಕರಪತ್ರ, ಬಣ್ಣದ ದ್ರಾವಣ, ವಿಡಿಯೋ ಮತ್ತು ಸ್ಟಿಲ್ ಕ್ಯಾಮೆರಾ, ನೀರಿನ ಬಾಟಲ್, ಶಸ್ತ್ರಾಸ್ತ್ರ, ತಿಂಡಿತಿನಿಸು, ಬಾವುಟ, ಪಟಾಕಿ, ಸೋಟಕ ವಸ್ತು ಎಲ್ಲವನ್ನೂ ಸಂಪೂರ್ಣ ನಿಷೇಸಲಾಗಿದೆ ಎಂದು ಹೇಳಿದರು.

ಜ.26ರಂದು ರೈತರು ಪ್ರತಿಭಟನೆ ನಡೆಸುವುದಾಗಿ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಚರ್ಚೆ ನಡೆಸುತ್ತಿದ್ದೇವೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೆಂದು ಮುಖರ್ಜಿ, ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸೇರಿದಂತೆ ಹಿರಿಯ ಅಕಾರಿಗಳು ಉಪಸ್ಥಿತರಿದ್ದರು.


SHARE THIS

Author:

0 التعليقات: