Saturday, 2 January 2021

ರಾಜ್ಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : 'KSRTC' ಉಚಿತ ಬಸ್ ಪಾಸ್ ಅವಧಿ ಜ.31 ರವರೆಗೆ ವಿಸ್ತರಣೆ


ರಾಜ್ಯದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : 'KSRTC' ಉಚಿತ ಬಸ್ ಪಾಸ್ ಅವಧಿ ಜ.31 ರವರೆಗೆ ವಿಸ್ತರಣೆ

ಬೆಂಗಳೂರು : ರಾಜ್ಯದಲ್ಲಿ ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಅವಧಿ ಮುಕ್ತಾಯಗೊಂಡಿದ್ದರೂ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ದಿನಾಂಕ 31-12-2020 ರವರೆಗೆ ಅವಕಾಶ ನೀಡಿ, ಕೆಎಸ್ ಆರ್ ಟಿ ಸಿ ಆದೇಶ ನೀಡಿತ್ತು.

ಇದೀಗ ಮುಂದುವರೆದು, ದಿನಾಂಕ 1:1:2021 ರಿಂದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ , ಪದವಿ ಕಾಲೇಜುಗಳು ಪ್ರಾರಂಭವಾಗಿರುವುದರಿಂದ ಎಲ್ಲಾ ವರ್ಗದ ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಶೀದಿಯೊಂದಿಗೆ 2019-20ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ತೋರಿಸಿ, ಸಂಬಂಧಪಟ್ಟ ಮಾರ್ಗದಲ್ಲಿ ಕರಾರಸಾ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ದಿನಾಂಕ 31:1:2021 ರವರೆಗೆ ಅವಕಾಶ ಕಲ್ಪಿಸಿದೆ. ನಿಗಮದ ಬಸ್ಸುಗಳಲ್ಲಿ ವಿದ್ಯಾರ್ಥಿ ಬಸ್ ಪಾಸುದಾರರಿಗೆ 2019-20ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಕೆ ಎಸ್ ಆರ್ ಟಿ ಸಿ ನಿಗಮವು ದಿನಾಂಕ 31:1 :2021 ರವರೆಗೆ ಅವಕಾಶ ಕಲ್ಪಿಸಿದೆ.

ಪ್ರಸಕ್ತ ವರ್ಷದಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ವಿದ್ಯಾರ್ಥಿಗಳು ಬಸ್ ಪಾಸ್ ಪಡೆಯಬೇಕಿರುವುದರಿಂದ ಈ ಬಗ್ಗೆ ತಮ್ಮ ವಿಭಾಗ ವ್ಯಾಪ್ತಿಯ ಶಾಲಾ/ಕಾಲೇಜು ಮಕ್ಕಳಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯುವಂತೆ ಸೂಚಿಸಿದೆ.



SHARE THIS

Author:

0 التعليقات: