Monday, 1 February 2021

ಮಹಾರಾಷ್ಟ್ರದಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯ : 12 ಮಕ್ಕಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್


ಮಹಾರಾಷ್ಟ್ರದಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯ : 12 ಮಕ್ಕಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್


ಯವತ್ಮಾಲ್: ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಬ್ಬಂದಿಯ ನಿರ್ಲಕ್ಷ್ಯದ ಪರಿಣಾಮ 12 ಮಕ್ಕಳಿಗೆ ಪೋಲಿಯೊ ಲಸಿಕೆ ಹನಿಗಳ ಬದಲಿಗೆ ಹ್ಯಾಂಡ್ ಸ್ಯಾನಿಟೈಸರ್ ಹನಿಗಳನ್ನು ಹಾಕಲಾಗಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.


ಮಕ್ಕಳಿಗೆ ಸ್ಯಾನಿಟೈಸರ್ ಹಾಕಲಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳ ಸ್ಥಿತಿ ಸ್ಥಿರವಾಗಿದೆ ಎಂದು ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಕಪ್ಸಿಕೊಪ್ರಿ ಗ್ರಾಮದ ಭನ್ಬೋರಾ ಆರೋಗ್ಯ ಕೇಂದ್ರದಲ್ಲಿ ಭಾನುವಾರ 1-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ವ್ಯಾಕ್ಸಿನೇಷನ್ ನಡೆಯುತ್ತಿರುವಾಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ. 12 ಮಕ್ಕಳಲ್ಲಿ ಒಂದು ಮಗು ವಾಂತಿ ಮಾಡಿದೆ. ಬಳಿಕ ಎಲ್ಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.


ಘಟನೆಗೆ ಕುರಿತು ತನಿಖೆ ನಡೆಯುತ್ತಿದ್ದು, ನಿರ್ಲಕ್ಷ್ಯ ವಹಿಸಿದ ಮೂವರು ಆರೋಗ್ಯ ಕಾರ್ಯಕರ್ತರನ್ನು ಅಮಾನತು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


 


SHARE THIS

Author:

0 التعليقات: