ಯಮುನಾ ಹೆದ್ದಾರಿಯಲ್ಲಿ ಆರು ವಾಹನಗಳ ಢಿಕ್ಕಿ: ಕನಿಷ್ಠ 12 ಜನರಿಗೆ ಗಾಯ
ಹೊಸದಿಲ್ಲಿ:ಉತ್ತರಪ್ರದೇಶದ ಗ್ರೇಟರ್ ನೊಯ್ಡಾದ ಯಮುನಾ ಎಕ್ಸ್ ಪ್ರೆಸ್ ವೇಯಲ್ಲಿ ಆರು ವಾಹನಗಳ ನಡುವೆ ಸಂಭವಿಸಿದ ಢಿಕ್ಕಿಯ ಪರಿಣಾಮ ಕನಿಷ್ಠ 12 ಜನರು ಗಾಯಗೊಂಡಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ರಸ್ತೆಯಲ್ಲಿ ದಟ್ಟ ಮಂಜು ಆವರಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಗಾಯಗೊಂಡಿರುವ 12 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಂಚಾರವನ್ನು ಸರಿಪಡಿಸುವ ಪ್ರಯತ್ನವನ್ನು ಮುಂದುವರಿಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ.
0 التعليقات: