ಬೆಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ಸಾಗಿಸುತ್ತಿದ್ದ 1.3 ಕೆಜಿ ಚಿನ್ನ ಜಪ್ತಿ
ಬೆಂಗಳೂರು : ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ನಗರದ ಏರ್ ಪೋರ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1.3 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಬಂದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ದೇಹದಲ್ಲಿ ಮತ್ತು ಪಾದರಕ್ಷೆ ಒಳಗೆ 62,35,681 ಮೌಲ್ಯದ ಪೇಸ್ಟ್ ರೂಪದ ಚಿನ್ನ ಪತ್ತೆಯಾಗಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ 12 ಲಕ್ಷದ ಮೌಲ್ಯದ ಡ್ರೋಣ್ ಕ್ಯಾಮರಾಗಳು ಪತ್ತೆಯಾಗಿದೆ. ಸದ್ಯ ಪ್ರಯಾಣಿಕನನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
0 التعليقات: