Saturday, 13 February 2021

ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: 14 ಸಾವು, 4 ಮಂದಿಗೆ ಗಾಯ


ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: 14 ಸಾವು, 4 ಮಂದಿಗೆ ಗಾಯ


ತಿರುಪತಿ: ಕರ್ನೂಲ್ ಜಿಲ್ಲೆಯ ವೆಳ್ದುರ್ತಿ ಮಂಡಲ್ ನ ಮಾದಾರ ಪುರಮ್ ಗ್ರಾಮದ ಬಳಿ ಭಾನುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 14 ಮಂದಿ ಮೃತಪಟ್ಟು, ಇತರ ನಾಲ್ವರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಇದ್ದವರು ಚಿತ್ತೂರು ಜಿಲ್ಲೆಯ ಮದನಪಲ್ಲಿ ಪ್ರದೇಶದಿಂದ ರಾಜಸ್ಥಾನದ ಅಜ್ಮೀರ್ ಗೆ ಯಾತ್ರಾರ್ಥಿಗಳು ತೆರಳುತ್ತಿದ್ದರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.


ಭಾನುವಾರ ಮುಂಜಾನೆ 3-30 ರ ನಡುವೆ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಮಿನಿ ವ್ಯಾನ್ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿತ್ತು.8 ಮಹಿಳೆಯರು, ಐವರು ಪುರುಷರು ಮತ್ತು ಒಂದು ಮಗು ಸೇರಿದಂತೆ 14 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಅಂತ ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ರಸ್ತೆ ಅಪಘಾತಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಗಾಯಾಳು ಪ್ರಯಾಣಿಕರನ್ನು ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ಸಾಗಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಮೃತದೇಹಗಳು ಸಂಪೂರ್ಣವಾಗಿ ಛಿದ್ರಗೊಂಡು ವಾಹನದ ಒಳಗೆ ಸಿಲುಕಿಕೊಂಡಿದ್ದ ಕಾರಣ ಪೊಲೀಸರು ಜೆಸಿಬಿ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸರ ಪ್ರಕಾರ, ಮಿನಿ ವ್ಯಾನ್ ಚಾಲಕ ನಿದ್ದೆಗೆ ಜಾರಿರಬಹುದು ಅಥವಾ ವಾಹನದ ಟೈರ್ ಸ್ಫೋಟಗೊಂಡಿರಬಹುದು, ಇದು ಅಪಘಾತಕ್ಕೆ ಕಾರಣವಾಗಿರಬಹುದು ಅಂತ ಹೇಳಿದ್ದಾರೆ. ಅಪಘಾತ ಸಂಭವಿಸಿದ ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಎನ್ನಲಾಗಿದೆ.SHARE THIS

Author:

0 التعليقات: