Tuesday, 23 February 2021

ಕೊರೋನಾ: ದೇಶಾದ್ಯಂತ 24 ಗಂಟೆಗಳಲ್ಲಿ 10,584 ಹೊಸ ಕೇಸ್ ಪತ್ತೆ, 78 ಮಂದಿ ಸಾವು


 ಕೊರೋನಾ: ದೇಶಾದ್ಯಂತ 24 ಗಂಟೆಗಳಲ್ಲಿ 10,584 ಹೊಸ ಕೇಸ್ ಪತ್ತೆ, 78 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಏರಿಳಿಯುತ್ತಿದ್ದು, ದೇಶದಲ್ಲಿಂದು 10,584 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,10,16,434ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಇನ್ನು ಒಂದೇ ದಿನ ಮಹಾಮಾರಿ ವೈರಸ್ 78 ಮಂದಿನ್ನು ಬಲಿಪಡೆದುಕೊಂಡಿದ್ದು, ಸಾವಿನ ಸಂಖ್ಯೆ 1,56,463ಕ್ಕೆ ಏರಿಕೆಯಾಗಿದೆ.

ಈ ನಡುವೆ ಒಟ್ಟಾರೆ 1,10,16,434 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 13,255 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 1,07,12,665ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,47,306 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗುತ್ತದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,17,45,552 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.


SHARE THIS

Author:

0 التعليقات: