Wednesday, 17 February 2021

ಕೊರೊನಾ ಬುಲೆಟಿನ್ : ರಾಜ್ಯದಲ್ಲಿ ಇಂದು 378 ಪಾಸಿಟಿವ್ ಕೇಸ್ ಪತ್ತೆ ; ಮೂವರು ಸಾವು


ಕೊರೊನಾ ಬುಲೆಟಿನ್ : ರಾಜ್ಯದಲ್ಲಿ ಇಂದು 378 ಪಾಸಿಟಿವ್ ಕೇಸ್ ಪತ್ತೆ ; ಮೂವರು ಸಾವು

ಬೆಂಗಳೂರು : ರಾಜ್ಯದಲ್ಲಿ ಇಂದು 378 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ಸಂಖ್ಯೆ 9,46,454ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 3 ಜನರು ಮೃತಪಟ್ಟಿದ್ದು,. ಇದುವರೆಗೂ ಮೃತಪಟ್ಟವರ ಸಂಖ್ಯೆ 12,276 ಕ್ಕೆ ಏರಿಕೆಯಾಗಿದೆ. . ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5,698 ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಇಂದು 537 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 9,28,461 ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ 253 ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 402771ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 3982 ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕೃಷಿ ಕಾನೂನು ವಿರೋಧಿಸಿ 'ರೈಲ್ ರೋಕೋ' ಚಳುವಳಿಗೆ ನಾಳೆ ಅನ್ನದಾತರ ಕರೆ








SHARE THIS

Author:

0 التعليقات: