Monday, 22 February 2021

ಹಿರೇನಾಗವೇಲಿ ಸ್ಪೋಟ: ಮೃತರ ಸಂಖ್ಯೆ 6 ಕ್ಕೆ ಏರಿಕೆ - ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ


ಹಿರೇನಾಗವೇಲಿ ಸ್ಪೋಟ: ಮೃತರ ಸಂಖ್ಯೆ 6 ಕ್ಕೆ ಏರಿಕೆ - ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ


ಚಿಕ್ಕಬಳ್ಳಾಪುರ ಜಿಲ್ಲೆ ಹಿರೇನಾಗವೇಲಿ ಸಮೀಪ ಜಿಲೆಟಿನ್ ಸ್ಫೋಟದ ಸ್ಥಳಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಸಚಿವರು ಬೆಳಗ್ಗೆಯೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡಿಬಂಡೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಅರಣ್ಯದಲ್ಲಿ ಬಚ್ಚಿಟ್ಟಿದ್ದ ಜಿಲೆಟಿನ್ ಸ್ಪೋಟಿಸಿ 6 ಮಂದಿ ಮೃತಪಟ್ಟಿದ್ದಾರೆ. ಸ್ಪೋಟದ ತೀವ್ರತೆಗೆ 10 ಕಿಲೋಮೀಟರ್ ದೂರದವರೆಗೂ ಭೂಮಿ ಕಂಪಿಸಿದ ಅನುಭವವಾಗಿದೆ. ನೂರಾರು ಮೀಟರ್ ದೂರದವರೆಗೆ ಮೃತದೇಹಗಳು ಛಿದ್ರವಾಗಿ ಬಿದ್ದಿವೆ.

ಘಟನಾ ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.SHARE THIS

Author:

0 التعليقات: