Thursday, 18 February 2021

ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ


ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆ

ಬೆಂಗಳೂರು : ರಾಜ್ಯದ ಜನರ ಬಹಳ ನಿರೀಕ್ಷೆ ಇಟ್ಟುಕೊಂಡಿರುವ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದೆ.

ಹೌದು, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಇಂದಿನ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿದೆ ಎಂದು ಸಂಪುಟ ಸಭೆ ಬಳಿಕ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ.

ಇನ್ನೂ, ಈ ವರ್ಷದ ರಾಜ್ಯ ಸರ್ಕಾರ ಬಜೆಟ್ ಮಂಡನೆ ಬಗ್ಗೆ ರಾಜ್ಯದ ಜನರು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದು, ಈ ಬಾರಿಯ ಬಜೆಟ್ ಯಾವ ಯಾವ ಕ್ಷೇತ್ರಕ್ಕೆ ಯಾವ ರೀತಿ ಲಾಭವಾಗಲಿದೆ. ಜನಸಾಮಾನ್ಯರು, ರೈತರಿಗೆ ಬಜೆಟ್ ಮಂಡನೆ ಎಷ್ಟರಮಟ್ಟಿಗೆ ಲಾಭದಾಯಕವಾಗಲಿದೆ ಎಂಬುದನ್ನು ಕಾದು ನೋಡಬೇಕು.


SHARE THIS

Author:

0 التعليقات: