ಕೇರಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣ: ಎಸ್ಡಿಪಿಐನ 8 ಮಂದಿ ಬಂಧನ
ಆಲಪ್ಪುಳ(ಕೇರಳ): ಆರ್ಎಸ್ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ(ಎಸ್ಡಿಪಿಐ) ಎಂಟು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದರು.
ಆಲಪ್ಪುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ಎಸ್ಡಿಪಿಐ ಮತ್ತು ಆರ್ಎಸ್ಎಸ್ ಕಾರ್ಯಕರ್ತರ ನಡುವೆ ಬುಧವಾರ ರಾತ್ರಿ ನಡೆದ ಘರ್ಷಣೆಯಲ್ಲಿ ಆರ್ಎಸ್ಎಸ್ ಕಾರ್ಯಕರ್ತ ನಂದು(23) ಎಂಬವರು ಮೃತಪಟ್ಟಿದ್ದರು.
ಎಸ್ಡಿಪಿಐಯು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಭಾಗವಾಗಿದೆ.
'ಈ ಸಂಘರ್ಷದಲ್ಲಿ ಎಸ್ಡಿಪಿಐ ಮತ್ತು ಆರ್ಎಸ್ಎಸ್ನ ಆರು ಕಾರ್ಯಕರ್ತರಿಗೆ ಗಾಯಗಳಾಗಿವೆ. ಅವರು ಆಲಪ್ಪುಳ ಮತ್ತು ಎರ್ನಾಕುಲಂನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಆರ್ಎಸ್ಎಸ್ನ ಒಬ್ಬ ಕಾರ್ಯಕರ್ತನ ಪರಿಸ್ಥಿತಿ ಬಹಳ ಗಂಭೀರವಾಗಿದೆ' ಎಂದು ಪೊಲೀಸರು ಮಾಹಿತಿ ನೀಡಿದರು.
ತಮ್ಮ ಕಾರ್ಯಕರ್ತರ ಮೇಲಾಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಬಿಜೆಪಿಯು ಜಿಲ್ಲೆಯಲ್ಲಿ ಗುರುವಾರ ಮುಂಜಾನೆಯಿಂದ ಹರತಾಳ ನಡೆಸುತ್ತಿದೆ.
0 التعليقات: