ತಮಿಳುನಾಡು: ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈಗೆ ವೈ-ಪ್ಲಸ್ ಭದ್ರತೆ
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ತಮಿಳುನಾಡಿನಲ್ಲಿ ವೈ-ಪ್ಲಸ್ ಭದ್ರತೆ ಒದಗಿಸಲಾಗಿದೆ.
ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಉಪಾಧ್ಯಕ್ಷರಾಗಿರುವ ಅವರು ಎಲ್ಲಿಗೆ ತೆರಳಿದರೂ ಐವರು ಪೊಲೀಸರು ಭದ್ರತೆ ಒದಗಿಸಲಿದ್ದಾರೆ.
2019ರಲ್ಲಿ ರಾಜೀನಾಮೆ ನೀಡಿದ್ದ ಅಣ್ಣಾಮಲೈ ಅವರು, 2020 ಆಗಸ್ಟ್ನಲ್ಲಿ ಬಿಜೆಪಿಗೆ ಸೇರಿದ್ದರು.
ಧಾರ್ಮಿಕ ಮೂಲಭೂತವಾದಿಗಳು ಮತ್ತು ಮಾವೋವಾದಿಗಳಿಂದ ಬೆದರಿಕೆ ಹೆಚ್ಚಿರುವ ಕಾರಣ ವೈ-ಪ್ಲಸ್ ಭದ್ರತೆ ನೀಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
0 التعليقات: