Friday, 12 February 2021

ರೋಹ್ಟಕ್:ಕಾಲೇಜಿನ ಜಿಮ್ನಾಸ್ಟಿಕ್ ಹಾಲ್‌ನಲ್ಲಿ ಗುಂಡಿನ ದಾಳಿ, ಮೂವರು ಸಾವು


ರೋಹ್ಟಕ್:ಕಾಲೇಜಿನ ಜಿಮ್ನಾಸ್ಟಿಕ್ ಹಾಲ್‌ನಲ್ಲಿ ಗುಂಡಿನ ದಾಳಿ, ಮೂವರು ಸಾವು

ಚಂಡೀಗಢ,ಫೆಬ್ರವರಿ 13: ಹರ್ಯಾಣದ ಕಾಲೇಜೊಂದರ ಜಿಮ್ನಾಸ್ಟಿಕ್ ಹಾಲ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದಾರೆ.

ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದಾರೆ. ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ತನಿಖೆಗೆ ತಂಡಗಳನ್ನು ರಚಿಸಿದ್ದೇವೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾರು ಗುಂಡು ಹಾರಿಸಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳಲ್ಲಿ ಮೂರು ವರ್ಷದ ಮಗು ಸಹ ಸೇರಿದೆ ಎಂದು ರೋಹ್ಟಕ್ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಶರ್ಮಾ ಹೇಳಿದ್ದಾರೆ.SHARE THIS

Author:

0 التعليقات: