Tuesday, 23 February 2021

ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದರ ಕಾಲೇಜಿನ ವಿದ್ಯಾರ್ಥಿನಿ ಸುಟ್ಟಗಾಯಗಳೊಂದಿಗೆ ಹೆದ್ದಾರಿಯಲ್ಲಿ ಪತ್ತೆ


 ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದರ ಕಾಲೇಜಿನ ವಿದ್ಯಾರ್ಥಿನಿ ಸುಟ್ಟಗಾಯಗಳೊಂದಿಗೆ ಹೆದ್ದಾರಿಯಲ್ಲಿ ಪತ್ತೆ

ಶಹಜಹಾನ್‌ಪುರ: ಮಾಜಿ ಕೇಂದ್ರ ಸಚಿವ ಸ್ವಾಮಿ ಚಿನ್ಮಯಾನಂದ ನಡೆಸುತ್ತಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನಗ್ನ ಸ್ಥಿತಿಯಲ್ಲಿ ಮತ್ತು ತೀವ್ರ ಸುಟ್ಟಗಾಯಗಳೊಂದಿಗೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಬಿದ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.

ದ್ವಿತೀಯ ಬಿಎ ವಿದ್ಯಾರ್ಥಿನಿಗೆ ಹೇಗೆ ಸುಟ್ಟಗಾಯಗಳಾಗಿದ್ದು, ಹೇಗೆ ರಸ್ತೆ ಬದಿಯಲ್ಲಿ ಬಿದ್ದಿದ್ದಾಳೆ ಎನ್ನುವುದು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಮ್ಯಾಜಿಸ್ಟ್ರೇಟರ್ ಮುಂದೆ ಹೇಳಿಕೆ ದಾಖಲಿಸುವ ಸ್ಥಿತಿಯಲ್ಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಶಹಜಹಾನ್‌ಪುರ ಎಸ್ಪಿ ಆನಂದ್ ಅವರ ಪ್ರಕಾರ, ವಿದ್ಯಾರ್ಥಿನಿಗೆ ಶೇಕಡ 60ರಷ್ಟು ಸುಟ್ಟಗಾಯಗಳಾಗಿದ್ದು, ಉತ್ತಮ ಚಿಕಿತ್ಸೆಗಾಗಿ ಲಕ್ನೋಗೆ ಕರೆದೊಯ್ಯಲಾಗಿದೆ. ಯುವತಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ತೀವ್ರ ನಿಗಾ ವಹಿಸಲಾಗುತ್ತಿದೆ ಎಂದು ಶ್ಯಾಮ್‌ಪ್ರಸಾದ್ ಮುಖರ್ಜಿ ಸಿವಿಲ್ ಆಸ್ಪತ್ರೆಯ ನಿರ್ದೇಶಕ ಎಸ್.ಸಿ.ಸುಂದರಿಯಾಲ್ ಹೇಳಿದ್ದಾರೆ.

ಸೋಮವಾರ ವಿದ್ಯಾರ್ಥಿನಿ ತಂದೆಯ ಜತೆ ಕಾಲೇಜಿಗೆ ಹೋಗಿದ್ದಳು. ಆದರೆ ತರಗತಿಯಿಂದ ವಾಪಸ್ಸಾಗಿರಲಿಲ್ಲ. ತಂದೆ ಹುಡುಕಾಟ ನಡೆಸುತ್ತಿ ದ್ದರು. ಲಕ್ನೋ- ಬರೇಲಿ ಹೆದ್ದಾರಿಯ ಬಳಿ ನಗ್ನ ಸ್ಥಿತಿಯಲ್ಲಿ ಹಾಗೂ ತೀವ್ರ ಸುಟ್ಟಗಾಯಗಳೊಂದಿಗೆ ಆಕೆ ಬಿದ್ದಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು.

ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಮಗಳನ್ನು ಕಾಲೇಜಿಗೆ ಕರೆತಂದು ತರಗತಿ ಮುಗಿಯುವವರೆಗೂ ಕಾಲೇಜಿನಲ್ಲಿ ಕಾಯುತ್ತಿದ್ದುದಾಗಿ ತಂದೆ ಹೇಳಿಕೆ ನೀಡಿದ್ದಾರೆ. ಕಾಲೇಜು ಕಟ್ಟಡದ ಮೂರನೇ ಮಹಡಿಯಲ್ಲಿ ತಾನು ಇದ್ದುದು ಮಾತ್ರ ವಿದ್ಯಾರ್ಥಿನಿಗೆ ನೆನಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಲಾಲಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಈ ವಿದ್ಯಾರ್ಥಿನಿ, ಚಿನ್ಮಯಾನಂದರ ಮುಮುಕ್ಷು ಆಶ್ರಮ ನಡೆಸುತ್ತಿದ್ದ ಸ್ವಾಮಿ ಸುಖದೇವಾನಂದ ಸ್ನಾತಕೋತ್ತರ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದರು.


SHARE THIS

Author:

0 التعليقات: