Wednesday, 10 February 2021

ಋತುಮತಿಯಾದ ತಕ್ಷಣ ಮುಸ್ಲಿಂ ಹೆಣ್ಣುಮಕ್ಕಳು ಮದುವೆಗೆ ಅರ್ಹರು : ಪಂಜಾಬ್-ಹರ್ಯಾಣ ಹೈಕೋರ್ಟ್ ತೀರ್ಪು


ಋತುಮತಿಯಾದ ತಕ್ಷಣ ಮುಸ್ಲಿಂ ಹೆಣ್ಣುಮಕ್ಕಳು ಮದುವೆಗೆ ಅರ್ಹರು : ಪಂಜಾಬ್-ಹರ್ಯಾಣ ಹೈಕೋರ್ಟ್ ತೀರ್ಪು

ಚಂಡೀಗಢ : ಮುಸ್ಲಿಂ ಬಾಲಕಿಯರು ಋತುಮತಿಯಾದ ತಕ್ಷಣ ಮದುವೆಗೆ ಅರ್ಹತೆ ಪಡೆದುಕೊಳ್ಳುತ್ತಾರೆ. ಅಂಥ ಬಾಲಕಿಯರಿಗೆ 18 ವರ್ಷ ಪೂರ್ಣಗೊಳದೇ ಇದ್ದರೂ ಅವರ ವಿವಾಹ ಕಾನೂನುಬದ್ಧವಾಗಿರುತ್ತದೆ ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ತೀರ್ಪು ನೀಡಿದೆ.

ಪಂಜಾಬ್ ನ 36 ವರ್ಷದ ವ್ಯಕ್ತಿಯೊಬ್ಬರು 17 ವರ್ಷದ ಬಾಲಕಿಯನ್ನು ವಿವಾಹವಾಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಅಕಾ ಸರೀನ್ ಅವರು ಸರ್ ದಿನ್ಶಾ ಫರ್ದುಂಜಿ ಮುಲ್ಲಾ ಅವರು ಬರೆದಿರುವ ಪ್ರಿನ್ಸಿಪಲ್ಸ್ ಆಫ್ ಮೊಹಮ್ಮದನ್ ಲಾ ಪುಸ್ತಕದ 195 ನೇ ವಿಧಿಯನ್ನು ಉಲ್ಲೇಖಿಸಿ ಹೈಕೋರ್ಟ್ ತೀರ್ಪು ನೀಡಿದ್ದು, ಪ್ರೌಢಾವಸ್ಥೆ ತಲುಪುವ ಮುಸ್ಲಿಂ ಹುಡುಗಿ ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹ ಆಗಬಹುದು ಎಂದು ತೀರ್ಪು ನೀಡಿದ್ದಾರೆ.



SHARE THIS

Author:

0 التعليقات: