Sunday, 7 February 2021

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ತಾಯಿ-ಮಗಳು; ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು.


ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ತಾಯಿ-ಮಗಳು; ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು.

ಚಿಕ್ಕೋಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರವಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನು ಮೂವರಿಗೆ ಗಂಭೀರ ಗಾಯಗಳಾಗಿವೆ. ಲತಾ ರಾಜೇಂದ್ರ ಪಾಟೀಲ (38) ಹಾಗೂ ಆಕೆಯ ಪುತ್ರಿ ಅನಿಷಾ ರಾಜೇಂದ್ರ ಪಾಟೀಲ (16) ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಸೌಂದಲಗಾ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಐದು ಜನರಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಬಹುತೇಕ ಜಜ್ಜಿಹೋಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು ಮಹಾರಾಷ್ಟ್ರದ ಸಾಂಗ್ಲಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು ಎನ್ನಲಾಗಿದ್ದು, ಮೃತರು ಹಾಗೂ ಗಾಯಾಳುಗಳ ಕುರಿತ ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಗಾಯಾಗಳುಗಳಿಗೆ ನಿಪ್ಪಾಣಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.SHARE THIS

Author:

0 التعليقات: