ಸಿಬಿಐ ಹಂಗಾಮಿ ಮುಖ್ಯಸ್ಥರಾಗಿ ಪ್ರವೀಣ್ ಸಿನ್ಹಾ ನೇಮಕ
ನವದೆಹಲಿ: ಸಿಬಿಐ ನಿರ್ದೇಶಕ ರಿಶಿ ಕುಮಾರ್ ಶುಕ್ಲಾ ಬುಧವಾರ ನಿವೃತ್ತಿಯಾದ ಹಿನ್ನೆಲೆಯಲ್ಲಿ, ಕೇಂದ್ರ ತನಿಖಾ ಸಂಸ್ಥೆಗೆ ಹೊಸ ನಿರ್ದೇಶಕರನ್ನು ನೇಮಕ ಮಾಡುವವರೆಗೆ ಸಿಬಿಐ ಹೆಚ್ಚುವರಿ ನಿರ್ದೇಶಕರಾಗಿದ್ದ ಪ್ರವೀಣ್ ಸಿನ್ಹಾ ಅವರನ್ನು ಹಂಗಾಮಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಗುಜರಾತ್ ಕೆಡರ್ನ 1988 ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಸಿನ್ಹಾ ಅವರು ನೂತನ ನಿರ್ದೇಶಕರನ್ನು ನೇಮಿಸುವವರೆಗೂ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ.
ಸಿಬಿಐ ಹಂಗಾಮಿ ನಿರ್ದೇಶಕಾರಿ ಪ್ರವೀಣ್ ಸಿನ್ಹಾ ನೇಮಕಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
0 التعليقات: