Saturday, 27 February 2021

ಚುನಾವಣಾ ಸಮೀಕ್ಷೆ; ಪುದುಚೇರಿಯಲ್ಲಿ ಬಿಜೆಪಿಗೆ ಬಹುಮತ


ಚುನಾವಣಾ ಸಮೀಕ್ಷೆ; ಪುದುಚೇರಿಯಲ್ಲಿ ಬಿಜೆಪಿಗೆ ಬಹುಮತ

ನವದೆಹಲಿ, ಫೆಬ್ರವರಿ 28: ಕೇಂದ್ರ ಚುನಾವಣಾ ಆಯೋಗ ಪುದುಚೇರಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. 30 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 6ರಂದು ಮತದಾನ ನಡೆಯಲಿದ್ದು, ಮೇ 2ರಂದು ಫಲಿತಾಂಶ ಘೋಷಣೆಯಾಗಲಿದೆ.

ಎಬಿಪಿ ಸಿ-ವೋಟರ್ ಪುದುಚೇರಿ ಸೇರಿದಂತೆ ವಿಧಾನಸಭೆ ಚುನಾವಣೆ ಘೋಷಣೆಯಾದ ರಾಜ್ಯಗಳ ಚುನಾವಣಾ ಪೂರ್ವ ಸಮೀಕ್ಷೆ ಮಾಡಿದೆ. ಪುದುಚೇರಿಯಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆ ಹೇಳಿದೆ.

ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆ ಹೇಳಿದೆ. ಆದರೆ, ಪುದುಚೇರಿಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ತಮಿಳುನಾಡು ಮತ್ತು ಪುದುಚೇರಿ ಚುನಾವಣೆಯನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಕೇಂದ್ರ ನಾಯಕರು ಸೇರಿದಂತೆ ಉಸ್ತುವಾರಿಗಳು ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ.

ಪುದುಚೇರಿಯಲ್ಲಿನ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 30. ಚುನಾವಣೆಯಲ್ಲಿ ಬಿಜೆಪಿ 17 ರಿಂದ 21 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ 8-12 ಸ್ಥಾನ ಮತ್ತು ಇತರೆ 1-3 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನವೇ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡು ಪತನಗೊಂಡಿತ್ತು. ಬಿಜೆಪಿ ಮತ್ತು ಮಿತ್ರಪಕ್ಷಗಳು ಸರ್ಕಾರ ರಚನೆ ಮಾಡಲು ಆಸಕ್ತಿ ತೋರದ ಹಿನ್ನಲೆಯಲ್ಲಿ ಲೆಫ್ಟಿನೆಂಟ್ ಗೌರ್ನರ್ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದರು.

ಕಾಂಗ್ರೆಸ್‌ನ ನಾಲ್ಕು ಡಿಎಂಕೆಯ ಓರ್ವ ಶಾಸಕರ ರಾಜೀನಾಮೆಯಿಂದಾಗಿ ಮುಖ್ಯಮಂತ್ರಿ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿತ್ತು. ಬಹುಮತ ಸಾಬೀತು ಪಡಿಸಲು ಒಂದು ದಿನದ ವಿಶೇಷ ಅಧಿವೇಶನ ನಡೆಸಲಾಯಿತು. ಆದರೆ, ಸರ್ಕಾರ ಬಹುಮತ ಸಾಬೀತು ಮಾಡಲು ವಿಫಲವಾಯಿತು.SHARE THIS

Author:

0 التعليقات: