Tuesday, 23 February 2021

ಪ.ಬಂಗಾಳದಲ್ಲಿ ಬಾಂಬ್ ದಾಳಿ : ಇಬ್ಬರು ಟಿಎಂಸಿ ಕಾರ್ಯಕರ್ತರು ಸಾವು, ಇಬ್ಬರಿಗೆ ಗಂಭೀರ ಗಾಯ


ಪ.ಬಂಗಾಳದಲ್ಲಿ ಬಾಂಬ್ ದಾಳಿ : ಇಬ್ಬರು ಟಿಎಂಸಿ ಕಾರ್ಯಕರ್ತರು ಸಾವು, ಇಬ್ಬರಿಗೆ ಗಂಭೀರ ಗಾಯ

ಕಲ್ಕತಾ: ಪಶ್ಚಿಮ ಬಂಗಾಳದ ಪಶ್ಚಿಮ ಬಂಗಾಳದ ಪಸ್ಚಿಮ್ ಮೇದಿನಿಪುರ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ನಡೆದ ಬಾಂಬ್ ಮತ್ತು ಬುಲೆಟ್ ಗಳ ದಾಳಿಗೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನ ಕಾರ್ಯಕರ್ತರೊಬ್ಬರು ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ ಅಂತ ತಿಳಿದು ಬಂದಿದೆ.

ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಅಭಿರಾಂಪುರ ಗ್ರಾಮದಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಶೌಭಿಕ್ ಡೋಲುಯಿ ಮತ್ತು ಇಬ್ಬರು ಟಿಎಂಸಿ ಕಾರ್ಯಕರ್ತರು ಕುಳಿತಿದ್ದಾಗ ಮೂವರು ಬೈಕ್ ನಲ್ಲಿ ಬಂದು ಬಾಂಬ್ ಎಸೆದಿದ್ದಾರೆ ಎನ್ನಲಾಗಿದೆ. ದಾಳಿಕೋರರು ಸ್ಥಳದಿಂದ ಪರಾರಿಯಾಗುವ ಮುನ್ನ 24 ವರ್ಷದ ಡೊಲುಯಿ ಮೇಲೆ ಗುಂಡು ಹಾರಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೂವರನ್ನು ಖರಗ್ ಪುರದ ಆಸ್ಪತ್ರೆಗೆ ಕರೆದೊಯ್ದಾಗ ಡೋಲುಯಿ ಅವರು ಮೃತಪಟ್ಟಿರುವುದಾಗಿ ಘೋಷಿಸಲಾಗಿದ್ದು, ಇನ್ನಿಬ್ಬರು ಗಂಭೀರ ಸ್ಥಿತಿಯಲ್ಲಿ ಮೇದಿನಿಪುರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.SHARE THIS

Author:

0 التعليقات: