ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎದುರಾಯ್ತು ಸಂಕಷ್ಟ
ಕೋಲ್ಕತ್ತಾ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದೆ.
ಅಮಿತ್ ಶಾ ವಿರುದ್ಧ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಹೂಡಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಫೆ.22ರಂದು ಬೆಳಿಗ್ಗೆ 10ಗಂಟೆಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಬೇಕು ಇಲ್ಲವೇ ವಕೀಲರ ಮೂಲಕ ಹಾಜರಾಗಿ ತಮ್ಮ ಹೆಳಿಕೆ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ತಿಳಿಸಿದೆ.
ಐಪಿಸಿ ಸೆಕ್ಷನ್ 500ರ ಅಡಿಯಲ್ಲಿ ಮಾನಹಾನಿ ಆರೋಪಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಅವರ ಖುದ್ದು ಹಾಜರಾತಿ ಅಗತ್ಯ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
0 التعليقات: