ಸಭಾಪತಿ ಸ್ಥಾನಕ್ಕೆ ನಸೀರ್ ಅಹ್ಮದ್ ನಾಮಪತ್ರ ಸಲ್ಲಿಕೆ
ಬೆಂಗಳೂರು : ತೀವ್ರ ಕುತೂಹಲ ಸೃಷ್ಟಿಸಿರುವ ವಿಧಾನ ಪರಿಷತ್ ‘ಸಭಾಪತಿ' ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಸೀರ್ ಅಹ್ಮದ್ ಅವರು ನಾಮಪತ್ರ ಸಲ್ಲಿಸಿದರು.
ಸೋಮವಾರ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಝಮೀರ್ ಅಹ್ಮದ್ ಖಾನ್, ಮೇಲ್ಮನೆ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ನಾರಾಯಣಸ್ವಾಮಿ ಸೇರಿದಂತೆ ಇನ್ನಿತರರ ಜತೆ ಆಗಮಿಸಿದ ನಸೀರ್ ಅಹ್ಮದ್ ಅವರು ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಸಭಾಪತಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಬಿಜೆಪಿ-ಜೆಡಿಎಸ್ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಫೆ.9ರಂದು ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಲಿದೆ.
0 التعليقات: