Tuesday, 9 February 2021

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ : ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ


ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ : ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ

ಬೆಂಗಳೂರು : ವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಇಂದು ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಬುಧವಾರ ಪೆಟ್ರೋಲ್ ಬೆಲೆ 70 ಪೈಸೆ ಹಾಗೂ ಡೀಸೆಲ್ ಬೆಲೆ 27 ಪೈಸೆ ಏರಿಕೆ ಯಾದ ನಂತರ ಇಂಧನ ಬೆಲೆ ದಾಖಲೆಯ ಏರಿಕೆ ಕಂಡಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 70 ಪೈಸೆ ಹೆಚ್ಚಳದ ನಂತರ ಪೆಟ್ರೋಲ್ ಬೆಲೆ 90.53 ರೂ. ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 87.60 ರೂ., ಡೀಸೆಲ್ ಬೆಲೆ 77.73 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 95 ರೂ. ಇಂದಿನ ಏರಿಕೆನಂತರ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 94.12 ರೂ., ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 84.63 ರೂ.ಆಗಿದೆ.

ಸೋಮವಾರ, ಏಪ್ರಿಲ್ ವಿತರಣೆಯ ಬ್ರೆಂಟ್ ಕಚ್ಚಾ ತೈಲ ದರವು ಒಂದು ಬ್ಯಾರೆಲ್ ಗೆ 60 ಡಾಲರ್ ತಲುಪಿತು,. ಕಚ್ಚಾ ತೈಲ ಬೆಲೆ ಏರಿಕೆ ಯಿಂದ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುವ ನಿರೀಕ್ಷೆ ಇದೆ.


SHARE THIS

Author:

0 التعليقات: