Saturday, 20 February 2021

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಏರ್ ಇಂಡಿಯಾ ವಿಮಾನ, ತಪ್ಪಿದ ಭಾರಿ ಅವಘಡ


ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಏರ್ ಇಂಡಿಯಾ ವಿಮಾನ, ತಪ್ಪಿದ ಭಾರಿ ಅವಘಡ

ವಿಜಯವಾಡ : 64 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ವೊಂದು ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವ ಘಟನೆ . ವಿಮಾನ ಲ್ಯಾಂಡಿಂಗ್ ಮಾಡುವ ವೇಳೆ ರನ್ ವೇ ಮೇಲೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಅವಘಡದಲ್ಲಿ ಯಾವ ಪ್ರಯಾಣಿಕರಿಗೂ ಯಾವುದೇ ತೊಂದರೆಯಾಗಿಲ್ಲ ಅಂತ ತಿಳಿದು ಬಂದಿದೆ.

ವಿಜಯವಾಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ವಿಮಾನದಲ್ಲಿದ್ದ ಎಲ್ಲ 64 ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಗೋ ಮಧುಸೂದನ್ ರಾವ್ ಹೇಳಿರುವುದಾಗಿ ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ. ದೋಹಾದಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ವು ರನ್ ವೇನಲ್ಲಿ ಇಳಿಯುವಾಗ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.SHARE THIS

Author:

0 التعليقات: