Wednesday, 17 February 2021

ಬಿಜೆಪಿ ನಮ್ಮ ಶಾಸಕರನ್ನು ಖರೀದಿಸುತ್ತಿದೆ : ಪುದುಚೇರಿ ಸಿಎಂ ನಾರಾಯಣಸ್ವಾಮಿ


ಬಿಜೆಪಿ ನಮ್ಮ ಶಾಸಕರನ್ನು ಖರೀದಿಸುತ್ತಿದೆ : ಪುದುಚೇರಿ ಸಿಎಂ ನಾರಾಯಣಸ್ವಾಮಿ

ಪುದುಚೇರಿ ಸರ್ಕಾರವನ್ನು ಉರುಳಿಸುವ ಸಲುವಾಗಿ ಭಾರತೀಯ ಜನತಾ ಪಕ್ಷ ತಮ್ಮ ಶಾಸಕರನ್ನು ಖರೀದಿಸುತ್ತಿದೆ ಎಂದು ಮುಖ್ಯಮಂತ್ರಿ ವಿ. ನಾರಾಯಣಸ್ವಾಮಿ ಬುಧವಾರ ಆರೋಪಿಸಿದ್ದಾರೆ. ಮೂವರು ಶಾಸಕರ ರಾಜೀನಾಮೆಯನ್ನು ಈಗಾಗಲೇ ಅಂಗೀಕರಿಸಲಾಗಿದೆ ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.

ಮಂಗಳವಾರ, ಪಕ್ಷವನ್ನು ತೊರೆದ ನಾಲ್ಕನೇ ಕಾಂಗ್ರೆಸ್ ಶಾಸಕ ಎ. ಜಾನ್ ಕುಮಾರ್ ಅವರು ಸರ್ಕಾರಕ್ಕೆ ರಾಜೀನಾಮೆ ನೀಡಿ, “ಕಾಂಗ್ರೆಸ್ ಸರ್ಕಾರದ ಬಗ್ಗೆ ಅಸಮಾಧಾನ” ತಮ್ಮ ರಾಜೀನಾಮೆಗೆ ಕಾರಣ ಎಂದು ಅವರು ಉಲ್ಲೇಖಿಸಿದ್ದರು. “ಬಿಜೆಪಿಯ ಆಟದ ಬಗ್ಗೆ ಜನರಿಗೆ ತಿಳಿದಿದೆ, ಅವರು 2021ರ ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ಸೂಕ್ತವಾದ ಉತ್ತರವನ್ನು ನೀಡುತ್ತಾರೆ” ಎಂದು ಪುದುಚೇರಿ ಮುಖ್ಯಮಂತ್ರಿ ತಿಳಿಸಿದ್ದಾರೆ.

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ತೆರವುಗೊಳಿಸಲ್ಪಟ್ಟ ಕಿರಣ್ ಬೇಡಿ ಬಗ್ಗೆ ಮಾತಾಡಿದ ಅವರು “ಕಳೆದ ನಾಲ್ಕು ವರ್ಷಗಳಿಂದ ನಮ್ಮ ಸರ್ಕಾರ ಪ್ರಕ್ಷುಬ್ದವಾಗಿತ್ತು. ಕಿರಣ್ ಬೇಡಿ ನಮ್ಮ ದಿನನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಮಸ್ಯೆ ಸೃಷ್ಟಿಸುತ್ತಿದ್ದರು” ಎಂದು ಆರೋಪಿಸಿದ್ದಾರೆ.SHARE THIS

Author:

0 التعليقات: