Friday, 26 February 2021

ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು


ಮದ್ದೂರು ಪೌರಕಾರ್ಮಿಕ ಆತ್ಮಹತ್ಯೆ ಪ್ರಕರಣ: ಇಬ್ಬರು ಪುರಸಭೆ ಅಧಿಕಾರಿಗಳ ಅಮಾನತು


ಆತ್ಮಹತ್ಯೆಗೆ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಮತ್ತು ಜಾಸ್ಮಿನ್ ಖಾನ್ ಅವರೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ

ಪುರಸಭೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪೌರ ಕಾರ್ಮಿಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಈ ಘಟನೆ ನಡೆದಿದೆ. ಪುರಸಭೆ ಪೌರಕಾರ್ಮಿಕರಾದ ನಾರಾಯಣ ಎಂಬುವವರು ನೇಣಿಗೆ ಶರಣಾಗಿದ್ದರು. ಇದಕ್ಕೆ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಮತ್ತು ಜಾಸ್ಮಿನ್ ಖಾನ್ ಅವರೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.

ಈ ಪ್ರಕರಣವನ್ನು ಮುಚ್ಚಿಹಾಕಲು ಪುರಸಭೆಯ ಇತರ ಅಧಿಕಾರಿಗಳು ಮತ್ತು ಕೌನ್ಸಿಲರ್‌ಗಳು ಸೇರಿ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ ಈ ವಿಷಯ ಸಮಾಜ ಕಲ್ಯಾಣ ಇಲಾಖೆಯ ಮಟ್ಟದಲ್ಲಿ ಚರ್ಚೆಗೆ ಬಂದು ಪುರಸಭೆಯ ಅಧಿಕಾರಿಗಳನ್ನು ಕರೆದು ತರಾಟೆಗೆ ತೆಗೆದುಕೊಂಡಿದ್ದರು. ನಂತರ ಪುರಸಭೆ ಮುಖ್ಯಾಧಿಕಾರಿ ಮುರುಗೇಶ್ ಮತ್ತು ಜಾಸ್ಮಿನ್ ಖಾನ್ ಈ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಈಗ ಪೌರಡಳಿತ ನಿರ್ದೇಶನಾಲಯದ ನಿರ್ದೇಶಕ ಬಿ.ಬಿ.ಕಾವೇರಿ, ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.SHARE THIS

Author:

0 التعليقات: