Friday, 26 February 2021

ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ಇಂದೂ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ


 ಆಭರಣ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ : ಇಂದೂ ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ಬೆಂಗಳೂರು : ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಇಂದೂ ಸಹ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ನಿನ್ನೆ 47,350 ರೂ. ಇದ್ದದ್ದು, ಇಂದು 47,170 ರೂ. ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನ ನಿನ್ನೆ 43,400 ರೂ. ಇದ್ದದ್ದು, ಇಂದು 43,240 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಂಡಿದ್ದು, ಇಂದು ಕೆಜಿ ಬೆಳ್ಳಿ ಬೆಲೆ 67,500 ರೂ. ಗೆ ಇಳಿಕೆಯಾಗಿದೆ.

ದೇಶದಲ್ಲೂ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, ನಿನ್ನೆ 45,740 ರೂ. ಇದ್ದ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 45,730 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 46,740 ರೂ.ಇದ್ದದ್ದು, ಇಂದು 46,730 ರೂ. ಆಗಿದೆ.


SHARE THIS

Author:

0 التعليقات: