Friday, 5 February 2021

ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದೇವೆ, ಸಮಸ್ಯೆಯಾದ್ರೆ ಸೂಕ್ತ ಕ್ರಮ: ಬಸವರಾಜ ಬೊಮ್ಮಾಯಿ


 ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದೇವೆ, ಸಮಸ್ಯೆಯಾದ್ರೆ ಸೂಕ್ತ ಕ್ರಮ: ಬಸವರಾಜ ಬೊಮ್ಮಾಯಿ

ಬೆಂಗಳೂರು: ನಾವು ರಾಜ್ಯದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಯಾರಿಗೂ ತೊಂದರೆ ಆಗೋದಿಲ್ಲ. ಒಂದ್ವೇಳೆ ಸಾರ್ವಜನಿಕರಿಗೆ ತೊಂದರೆಯಾದ್ರೆ, ಖಂಡಿತ ಕ್ರಮ ಕೈಗೊಳ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಂದ್ಹಾಗೆ, ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ರೈತರು ಮಾಡ್ತಿರುವ ಚಕ್ಕಾ ಜಾಮ್‌ ಪ್ರತಿಭಟನೆಗೆ ರಾಜ್ಯ ರೈತರು ಸಾಥ್‌ ನೀಡಿದ್ದು, ಹೆದ್ದಾರಿಗಳನ್ನ ಬಂದ್‌ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, 'ನಾವು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಯಾರಿಗೂ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಂಡಿದ್ದು, ಒಂದ್ವೇಳೆ ತೊಂದರೆಯಾದ್ರೆ, ರೈತರ ಮನವೋಲಿಸುವ ಪ್ರಯತ್ನ ಮಾಡ್ತೇವೆ ಎಂದರು.


SHARE THIS

Author:

0 التعليقات: