Sunday, 28 February 2021

ಕಾಲೇಜಿನ ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ


 ಕಾಲೇಜಿನ ಕಟ್ಟಡದ ಮೇಲಿನಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ವಿದ್ಯಾರ್ಥಿಯೋರ್ವ ಕಾಲೇಜಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದಿದೆ.

ಜಯಂತ್ ರೆಡ್ಡಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಆತ್ಮಹತ್ಯೆಗೂ ಮುನ್ನ ಈತ ಡೆತ್ ನೋಟ್ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಎಂದಿನಂತೆ ಕಾಲೇಜಿಗೆ ಬಂದ ವಿದ್ಯಾರ್ಥಿ ಕಾಲೇಜಿನ ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.


SHARE THIS

Author:

0 التعليقات: