Thursday, 11 February 2021

ಕುರುಬ ಸಮುದಾಯವನ್ನು ಒಡೆಯುವುದೇ ಬಿಜೆಪಿ-ಆರೆಸೆಸ್ಸ್ ಉದ್ದೇಶ : ಸಿದ್ದರಾಮಯ್ಯ


 ಕುರುಬ ಸಮುದಾಯವನ್ನು ಒಡೆಯುವುದೇ ಬಿಜೆಪಿ-ಆರೆಸೆಸ್ಸ್ ಉದ್ದೇಶ : ಸಿದ್ದರಾಮಯ್ಯ

ಬೆಂಗಳೂರು, ಫೆ. 11: ‘ಕುರುಬರ ಮೀಸಲಾತಿ ಹೋರಾಟದಲ್ಲಿ ಆರೆಸೆಸ್ಸ್ ಮತ್ತು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಕುರುಬ ಸಮುದಾಯವನ್ನು ಒಡೆಯುವುದೇ ಅವರ ಮುಖ್ಯ ಉದ್ದೇಶ' ಎಂದು ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆರೋಪಿಸಿದ್ದಾರೆ.

 ಸರಣಿ ಟ್ವೀಟ್ ಮಾಡಿರುವ ಅವರು, ‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ ? ತಮ್ಮದೇ ಸರಕಾರದ ವಿರುದ್ಧವಲ್ಲವೇ ? ಅರ್ಥವಾಗೋಕೆ ಇದಕ್ಕಿಂತ ಹೆಚ್ಚು ಬೇಕಾ ?' ಎಂದು ಪ್ರಶ್ನಿಸಿದ್ದಾರೆ.

‘5 ವರ್ಷ ಮುಖ್ಯಮಂತ್ರಿಯಾಗಿ ನಾಡಿನ ಶೋಷಿತ ಸಮುದಾಯಗಳಿಗಾಗಿ ಏನೆಲ್ಲಾ ಕೆಲಸ ಮಾಡಿದ್ದೇನೆ ಎಂದು ಜನರಿಗೆ ಗೊತ್ತು. ನನ್ನ ಕೆಲಸದ ಬಗ್ಗೆ ಸರ್ಟಿಫಿಕೇಟ್ ಕೊಡೋಕೆ ಕೆ.ಎಸ್.ಈಶ್ವರಪ್ಪ ಯಾರು ? ಅವರು ಕೊಡೋ ಸರ್ಟಿಫಿಕೇಟ್ ಅಗತ್ಯ ನನಗಿಲ್ಲ. ತಮ್ಮ ಸರಕಾರ ಏನು ಮಾಡಿದೆ ಎಂದು ಅವರು ಹೇಳಬೇಕು' ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

‘ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ(ಎಸ್ಟಿ)ಕ್ಕೆ ಸೇರಿಸುವ ಸಂಬಂಧ ಕುಲಶಾಸ್ತ್ರ ಅಧ್ಯಯನ ಮಾಡುವಂತೆ ನಾನು ಮುಖ್ಯಮಂತ್ರಿ ಯಾಗಿದ್ದಾಗ ಆದೇಶಿಸಿದ್ದೆ, ಈಗಲೂ ಅಧ್ಯಯನ ನಡೆಯುತ್ತಿದೆ, ಅದು ಮುಗಿದು ವರದಿ ಬಂದ ನಂತರ ಸರಕಾರದ ಮೇಲೆ ಒತ್ತಡ ಹೇರಬೇಕು. ಈಗಲೇ ಸಮಾವೇಶ, ರ್ಯಾಲಿಗಳು ಅನಗತ್ಯ ಅನ್ನೋದು ನನ್ನ ಅನಿಸಿಕೆ' ಎಂದು ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.

'ಉಪಚುನಾವಣೆ ನಡೆಯಲಿರುವ ಉತ್ತರ ಕರ್ನಾಟಕದ ಭಾಗಗಳಲ್ಲಿ ಜೆಡಿಎಸ್ ದುರ್ಬಲವಾಗಿದೆ. ಈ ಹಿನ್ನೆಲೆಯಲ್ಲಿ ತಮಗಿರುವ ಅಲ್ಪಸ್ವಲ್ಪ ಬಲವನ್ನು ಬಿಜೆಪಿಗೆ ಧಾರೆಯೆರೆದು ಆ ಪಕ್ಷಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿಲ್ಲ''


SHARE THIS

Author:

0 التعليقات: