ಕೊಡಗು ಜಿಲ್ಲೆ ಭೇಟಿಗಾಗಿ ಬೆಂಗಳೂರಿನಿಂದ ರಾಷ್ಟ್ರಪತಿ ಪ್ರಯಾಣ
ಬೆಂಗಳೂರು, ಫೆ.6: ರಾಷ್ಟ್ರಪತಿ ರಾಮನಾಥ್ ಕೋವಿಂದ ಅವರು ಇಂದು ಸಂಸಾರ ಸಮೇತರಾಗಿ ಕೊಡಗು ಜಿಲ್ಲೆಯ ಅಧಿಕೃತ ಭೇಟಿಗಾಗಿ ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರಿನಲ್ಲಿ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಬೆಳಗ್ಗೆ ಪ್ರಯಾಣ ಬೆಳೆಸಿದರು.
ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ ಅವರೂ ರಾಷ್ಟ್ರಪತಿ ಜೊತೆಯಲ್ಲಿ ಇಂದು ಕಾವೇರಿ ಉಗಮಸ್ಥಾನ ತಲಾಕಾವೇರಿಗೆ ಬೇಟಿ ನೀಡುವರು.
ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಸಹ ರಾಷ್ಟ್ರಪತಿ ಜೊತೆ ಪ್ರಯಾಣಿಸಿದರು.
ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನಗರದ ಎಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಯವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು.
0 التعليقات: