Friday, 5 February 2021

ಇಂದು ಮಡಿಕೇರಿಗೆ ರಾಷ್ಟ್ರಪತಿ ಕೋವಿಂದ್‌ : ತಲಕಾವೇರಿಯಲ್ಲಿ ಸಾರ್ವಜನಿಕ ಪ್ರವೇಶ ನಿಷೇಧ


ಇಂದು ಮಡಿಕೇರಿಗೆ ರಾಷ್ಟ್ರಪತಿ ಕೋವಿಂದ್‌ : ತಲಕಾವೇರಿಯಲ್ಲಿ ಸಾರ್ವಜನಿಕ ಪ್ರವೇಶ ನಿಷೇಧ

ಮಡಿಕೇರಿ:ರಾಷ್ಟ್ರಪತಿ ರಾಮನಾಥ ಕೋವಿಂದ್‌ ಇಂದು ಮಡಿಕೇರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಭಿಗಿ ಭದ್ರತೆ ಮಾಡಿಕೊಳ್ಳಲಾಗಿದೆ. ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ತಲಕಾವೇರಿ, ಮಡಿಕೇರಿಯಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು, ತಲಕಾವೇರಿಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ ಹೇರಲಾಗಿದೆ.

ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಭಾಗಮಂಡಲದಿಂದ ತಲಕಾವೇರಿ ತನಕ 8 ಕಿ.ಮೀ. ಅಂತರದಲ್ಲಿ ಭಾರೀ ಸಂಖ್ಯೆಯಲ್ಲಿ ಪೊಲೀಸರ‌ ನಿಯೋಜನೆ ಮಾಡಲಾಗಿದೆ.

ಶನಿವಾರ ಬೆಳಗ್ಗೆ ಭಾಗಮಂಡಲದ ಕಾವೇರಿ ಕಾಲೇಜು ಹೆಲಿಪ್ಯಾಡ್‌ಗೆ ಆಗಮಿಸಲಿರುವ ರಾಮನಾಥ ಕೋವಿಂದ್‌ ನಂತರ ಕಾವೇರಿ ನದಿ ಉಗಮಸ್ಥಾನ ತಲಕಾವೇರಿ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಡಿಕೇರಿಯಲ್ಲಿ ಸರಕಾರದ ವತಿಯಿಂದ ಅಭಿವೃದ್ಧಿಪಡಿಸಲಾಗಿರುವ ಜನರಲ್‌ ತಿಮ್ಮಯ್ಯ ಸ್ಮಾರಕ ಭವನ, ವಸ್ತು ಸಂಗ್ರಹಾಲಯವನ್ನು ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಮಾಹಿತಿ ನೀಡಿದ್ದಾರೆ.SHARE THIS

Author:

0 التعليقات: