Sunday, 7 February 2021

ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ; ಸಹೋದರಿಯ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವಕ ಮೃತ್ಯು


ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ; ಸಹೋದರಿಯ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವಕ ಮೃತ್ಯು

ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸಹೋದರಿಯ ನಿಶ್ಚಿತಾರ್ಥಕ್ಕೆ ಬೆಂಗಳೂರಿನಿಂದ ಮನೆಗೆ ಬಂದಿದ್ದ ಯುವಕ ಮೃತಪಟ್ಟಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಪೇಟೆಯಲ್ಲಿ ರವಿವಾರ ಬೆಳಗ್ಗೆ ಸಂಭವಿಸಿದೆ.

ಕಲ್ಲಡ್ಕದ ಬಿ.ಕೆ. ನಗರ ನಿವಾಸಿ ಹಿಮಾದ್ ಮೃತಪಟ್ಟ ಯುವಕ.

ಹಿಮಾದ್ ನ ಸಹೋದರಿಯ ನಿಶ್ಚಿತಾರ್ಥ ಇಂದು ಬಿ.ಕೆ.ನಗರದ ನಿವಾಸದಲ್ಲಿ ನಿಗದಿಯಾಗಿತ್ತು. ಹುಡುಗನ ಕಡೆಯವರು ಇಂದು ಮಧ್ಯಾಹ್ನ ಮನೆಗೆ ಆಗಮಿಸುವ ಹಿನ್ನೆಲೆಯಲ್ಲಿ ಸಾಮಗ್ರಿ ಖರೀದಿಗಾಗಿ ಹಿಮಾದ್ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬಂದ ಟ್ಯಾಂಕರ್ ಹಿಮಾದ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಹಿಮಾದ್ ಮೇಲೆಯೆ ಟ್ಯಾಂಕರ್ ಚಕ್ರ ಹರಿದಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಟ್ರಾಫಿಕ್ ಎಸ್ ಐ ರಾಜೇಶ್ ಕೆ.ವಿ. ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



SHARE THIS

Author:

0 التعليقات: