ಕಡಬ: ಆ್ಯಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ
ಕಡಬ, ಫೆ.12: 108 ಆ್ಯಂಬುಲೆನ್ಸ್ ನಲ್ಲಿ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಶುಕ್ರವಾರ ಕಡಬದ ನಡೆದಿದೆ.
ಕಡಬದ ಕುಟ್ರುಪ್ಪಾಡಿ ಗ್ರಾಮದ ಅಲಾರ್ಮೆ ನಿವಾಸಿ ಲಲಿತಾ ಎಂವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು.
ಹೆರಿಗೆ ಅವಧಿಗಿಂತ ಮೊದಲೇ ನೋವು ಕಾಣಿಸಿಕೊಂಡಿದ್ದರಿಂದ ಲಲಿತಾರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲು ವೈದ್ಯಾಧಿಕಾರಿ ಸೂಚಿಸಿದ್ದರು. ಅದರಂತೆ ಕಡಬದ 108 ಆ್ಯಂಬುಲೆನ್ಸ್ ನಲ್ಲಿ ಪುತ್ತೂರಿಗೆ ಕರೆದೊಯ್ಯುವ ವೇಳೆ ಆಲಂಕಾರು ಸಮೀಪದ ಶಾಂತಿಮೊಗರು ಎಂಬಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ತಾಯಿ ಮತ್ತು ಮಗು ಆರೋಗ್ಯದಿಂದಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಎಂಟಿ ನವ್ಯಾ ಹಾಗೂ ಪೈಲಟ್ ರಾಜೇಶ್ ಸಹಕರಿಸಿದರು.
0 التعليقات: