Friday, 12 February 2021

ಎಲ್ಲೆಂದರಲ್ಲಿ ಯಾವಾಗ ಬೇಕಾದರೂ ಪ್ರತಿಭಟನೆ ನಡೆಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್


 ಎಲ್ಲೆಂದರಲ್ಲಿ ಯಾವಾಗ ಬೇಕಾದರೂ ಪ್ರತಿಭಟನೆ ನಡೆಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ನವದೆಹಲಿ : ಪ್ರತಿಭಟನೆಯ ಹಕ್ಕಿದೆ ಎಂದ ಮಾತ್ರಕ್ಕೆ, ಎಲ್ಲೆಂದರಲ್ಲಿ ಯಾವಾಗ ಬೇಕಿದ್ದರೂ ಪ್ರತಿಭಟನೆ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ಧ ನಡೆದ ಪ್ರತಿಭಟನೆಗಳನ್ನು ಕಾನೂನು ಬಾಹಿರ ಎಂದು ಹೇಳಿದ್ದ ತನ್ನ ತೀರ್ಪನ್ನು ಬದಲಿಸಲು ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ನಿರಾಕರಿಸಿರುವ ಕೋರ್ಟ್, ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ದೆಹಲಿಯ ಶಾಹೀನ್ ಬಾಗ್ ನಲ್ಲಿ 2019ರಲ್ಲಿ ಮೂರು ತಿಂಗಳ ಕಾಲ ನಡೆದ ಪ್ರತಿಭಟನೆಯನ್ನು 2020 ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ ಕಾನೂನು ಬಾಹಿರ ಎಂದು ತೀರ್ಪು ನೀಡಿತ್ತು. ಈ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ಹನ್ನೆರಡು ಹೋರಾಟಗಾರರು ಮೇಲ್ಮನವಿ ಸಲ್ಲಿಸಿದ್ದರು.

ಪ್ರತಿಭಟಿಸುವ ಮತ್ತು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕು ಕೆಲವೊಂದು ಕರ್ತವ್ಯಗಳೊಂದಿಗೆ ಬರುತ್ತದೆ. ಪ್ರತಿಭಟನೆಗಳನ್ನು ಅದಕ್ಕಾಗಿ ನಿಗದಿಪಡಿಸಲಾದ ಸ್ಥಳಗಳಲ್ಲಿ ಮಾತ್ರ ಮಾಡತಕ್ಕದ್ದು ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಪ್ರತಿಭಟನೆ ಹಕ್ಕನ್ನು ಯಾವುದೇ ಸಮಯದಲ್ಲಿ ಎಲ್ಲಾ ಕಡೆಗಳಲ್ಲೂ ಚಲಾಯಿಸಲಾಗದು. ದಿಢೀರನೆ ಉಂಟಾಗುವ ಪ್ರತಿಭಟನೆಗಳು ಸರಿ. ಆದರೆ, ದೀರ್ಘಕಾಲ ನಡೆಸುವ ಪ್ರತಿಭಟನೆಯಲ್ಲಿ ನಿರಂತರವಾಗಿ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡು ಬೇರೆಯವರ ಹಕ್ಕುಗಳಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ಕೋರ್ಟ್ ತಿಳಿಸಿದೆ.


SHARE THIS

Author:

0 التعليقات: