ಕೆಜೆ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಗೆ ಹೈಕೋರ್ಟ್ ಜಾಮೀನು
ಬೆಂಗಳೂರು, ಫೆ.12: ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಸಂಪತ್ ರಾಜ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.
ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ವೇಳೆ ಸಂಪತ್ ರಾಜ್ ತಮ್ಮ ಬೆಂಬಲಿಗರಿಗೆ ಕುಮ್ಮಕ್ಕು ನೀಡಿ, ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿ ಸಂಪತ್ ರಾಜ್ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಸದ್ಯ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
0 التعليقات: