ರೈತರ ಪ್ರತಿಭಟನೆ ವೇಳೆ ದೆಹಲಿಯಲ್ಲಿ ಹಿಂಸಾಚಾರ ಪ್ರಕರಣ: ಮತ್ತೆ ಮೂವರ ಬಂಧನ
ನವದೆಹಲಿ: ಗಣರಾಜ್ಯೋತ್ಸವ ದಿನದಂದು ದೆಹಲಿಯ ಬುರಾರಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಬಂಧಿತರನ್ನು ಸುಖ್ಮೀತ್ ಸಿಂಗ್ (35), ಗುಣ್ದೀಪ್ ಸಿಂಗ್ (33) ಮತ್ತು ಹರ್ವೀಂದರ್ ಸಿಂಗ್ (32) ಎಂದು ಗುರ್ತಿಸಲಾಗಿದೆ.
ಫೆಬ್ರವರಿ 10 ರಂದು ಪ್ರಕರಣ ಸಂಬಂದ ದೆಹಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದರು. ಇದೀಗ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣ ಸಂಬಂಧ ಈ ವರೆಗೂ ಒಟ್ಟಾರೆ 14 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಜನವರಿ 26 ರಂದು ನಡೆದ ಟ್ರ್ಯಾಕ್ಟರ್ ರ್ಯಾಲಿ ವೇಳೆ ಪ್ರತಿಭಟನಾ ನಿರತ ರೈತರು ಮತ್ತು ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿತ್ತು. ಘಟನೆಯಲ್ಲಿ ಒಬ್ಬ ರೈತ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.
0 التعليقات: