ರಾಮನಗರ ಬಂದ್: ವರ್ತಕರ ಬೆಂಬಲ, ಬೃಹತ್ ಮೆರವಣಿಗೆ
ರಾಮನಗರ: ನಗರಸಭೆ ಆಡಳಿತ ವೈಫಲ್ಯ ಹಾಗೂ ರೇಷ್ಮೆಗೂಡು ಮಾರುಕಟ್ಟೆ ಚನ್ನಪಟ್ಟಣಕ್ಕೆ ಸ್ಥಳಾಂತರ ಖಂಡಿಸಿ ವಿವಿಧ ಸಂಘಟನೆಗಳು ಶನಿವಾರ ರಾಮನಗರ ಬಂದ್ ಗೆ ಕರೆ ನೀಡಿದ್ದು, ವರ್ತಕರಿಂದ ಬೆಂಬಲ ವ್ಯಕ್ತವಾಯಿತು. ಬಂದ್ ಬೆಂಬಲಿಸಿ ಬೃಹತ್ ಮೆರವಣಿಗೆಯೂ ನಡೆಯಿತು.
ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ರೇಷ್ಮೆಗೂಡು ಮಾರುಕಟ್ಟೆಯಲ್ಲಿ ವಹಿವಾಟು ನಡೆಯಲಿಲ್ಲ. ಬಸ್ ಗಳ ಸಂಚಾರ ಎಂದಿನಂತೆ ಇತ್ತು. ಓಡಾಟಕ್ಕೆ ಯಾವುದೇ ಅಡ್ಡಿ ಆಗಲಿಲ್ಲ.
ಮೆರವಣಿಗೆ: ಬಂದ್ ಅಂಗವಾಗಿ ಜನಶಕ್ತಿ ವೇದಿಕೆ ನೇತೃತ್ವದಲ್ಲಿ ಮಿನಿ ವಿಧಾನಸೌಧದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಯಿತು. ಸಾವಿರಕ್ಕೂ ಹೆಚ್ಚು ಮಂದಿ ಹೆಜ್ಜೆ ಹಾಕಿದರು.
0 التعليقات: