Sunday, 28 February 2021

ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡ ಪ್ರಧಾನಿ ಮೋದಿ

 

ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಸ್ವದೇಶೀಯವಾಗಿ ಅಭಿವೃದ್ಧಿಪಡಿಸಿದ ಭರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸಿದ ಕೋವ್ಯಾಕ್ಸಿನ್ ಲಸಿಕೆಯನ್ನು ಹಾಕಿಸಿಕೊಂಡರು.

ಸೋಮವಾರದಿಂದ ದೇಶದಲ್ಲೆಡೆ 60 ವರ್ಷ ಮೇಲ್ಪಟ್ಟ ಹಾಗೂ 45 ವರ್ಷ ಮೇಲ್ಪಟ್ಟ ಉದ್ಯೋಗಿಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಂಡರು. ಪುದುಚೇರಿಯ ಸಿಸ್ಟರ್ ಪಿ.ನಿವೇದಿತಾ ಪ್ರಧಾನಿ ನರೇಂದ್ರ ಮೋದಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಿದರು.

ನಂತರ ಮಾತನಾಡಿದ ಪ್ರಧಾನಿ ಮೋದಿ, ಜಾಗತಿಕವಾಗಿ ಕಾಡುತ್ತಿರುವ ಕೋವಿಡ್ ವಿರುದ್ಧ ನಮ್ಮ ದೇಶದ ವೈದ್ಯರು ಎಷ್ಟು ಕ್ಷಿಪ್ರವಾಗಿ ಹೋರಾಟ ಮಾಡುತ್ತಿದ್ದಾರೆ ಎಂಬುದಕ್ಕೆ ಇದುವೇ ಸಾಕ್ಷಿ. ಎಲ್ಲರೂ ಈ ಲಸಿಕೆ ಪಡೆಯಬೇಕು. ಈ ಮೂಲಕ ಕೋವಿಡ್ ಮುಕ್ತ ಮಾಡಲು ಎಲ್ಲರೂ ಒಗ್ಗೂಡಬೇಕು ಎಂದು ಅವರು ಮನವಿ ಮಾಡಿದರು.


SHARE THIS

Author:

0 التعليقات: