Wednesday, 3 February 2021

ಹೊಸ ಸಭಾಪತಿ ಆಯ್ಕೆ ತಂತ್ರ: ಪರಿಷತ್ ಕಲಾಪ ಮತ್ತೆರಡು ದಿನ ಮುಂದುವರಿಸುವಂತೆ ಸರ್ಕಾರದ ಪತ್ರ

 

ಹೊಸ ಸಭಾಪತಿ ಆಯ್ಕೆ ತಂತ್ರ: ಪರಿಷತ್ ಕಲಾಪ ಮತ್ತೆರಡು ದಿನ ಮುಂದುವರಿಸುವಂತೆ ಸರ್ಕಾರದ ಪತ್ರ

ಬೆಂಗಳೂರು: ವಿಧಾನ ಪರಿಷತ್ ಕಲಾಪವನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರಿಸುವಂತೆ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಅವರಿಗೆ ಸರ್ಕಾರ ಮನವಿ ಮಾಡಿದೆ.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ಅವರು ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಅವರಿಗೆ ಪತ್ರ ನೀಡಿದ್ದಾರೆ.

ಸಭಾಪತಿ ರಾಜೀನಾಮೆಗೆ ಪಟ್ಟು ಹಿಡಿದಿರುವ ಬಿಜೆಪಿ, ಅವರ ರಾಜೀನಾಮೆ ನೀಡಿದ ನಂತರ ನೂತನ ಸಭಾಪತಿ ಆಯ್ಕೆ ನಡೆಸಲು ಕಲಾಪ ಮುಂದುವರೆಸಲು ನಿರ್ಧರಿಸಿದೆ. ಈಗಾಗಲೇ ಉಪ ಸಭಾಪತಿ ಚುನಾವಣೆ ನಡೆದಿದ್ದು, ಬಿಜೆಪಿಯ ಪ್ರಾಣೇಶ್ ಅವರು ಆಯ್ಕೆಯಾಗಿದ್ದಾರೆ.

ಪ್ರತಾಪ್‌ಚಂದ್ರ ಶೆಟ್ಟಿ ರಾಜೀನಾಮೆ? ವಿಧಾನಪರಿಷತ್‌ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಗುರುವಾರ ಅಥವಾ ಶುಕ್ರವಾರ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಬುಧವಾರ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಕುರಿತು ಸಹ ಚರ್ಚೆಯಾಗಿ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉಪ ಸಭಾಪತಿ ಚುನಾವಣೆ ನಂತರ ರಾಜೀನಾಮೆ ನೀಡಲು ಪ್ರತಾಪಚಂದ್ರ ಶೆಟ್ಟಿ ತೀರ್ಮಾನಿಸಿದ್ದರು. ಆದರೆ, ಈ ಚುನಾವಣೆಯಲ್ಲಿ ಜೆಡಿಎಸ್‌ ಬಿಜೆಪಿಗೆ ಬೆಂಬಲ ನೀಡುವುದು ದಾಖಲಾಗಲಿ ಎಂಬ ಕಾರಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಕಣಕ್ಕಿಳಿಸಿತ್ತು. ಇದೀಗ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಚರ್ಚೆಯಾಗಿ ಕಾಂಗ್ರೆಸ್‌ಗೆ ಮುಜುಗರ ಉಂಟಾಗು ವುದು ತಪ್ಪಿಸಲು ಪ್ರತಾಪಚಂದ್ರ ಶೆಟ್ಟಿ ಅವರು ರಾಜೀನಾಮೆ ನೀಡಿ ಪ್ರಕರಣಕ್ಕೆ ತೆರೆ ಎಳೆಯಲಿದ್ದಾರೆ ಎನ್ನಲಾಗಿದೆ.


SHARE THIS

Author:

0 التعليقات: