Thursday, 25 February 2021

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು : Dgï©L ಗವರ್ನರ್


ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ, ರಾಜ್ಯ ಸರ್ಕಾರಗಳು ಮುಂದಾಗಬೇಕು : Dgï©L ಗವರ್ನರ್

ಮುಂಬೈ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇಂಧನಕ್ಕೆ ವಿಧಿಸುತ್ತಿರುವ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಂತ್ ದಾಸ್ ಹೇಳಿದ್ದಾರೆ.

ತೈಲ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯ ಸಾಧಿಸಬೇಕಾದಂತಹ ಅವಶ್ಯಕತೆ ಇದೆ ಎಂದು ಅವರು ಹೇಳಿದ್ದಾರೆ.

ಇಂಧನ ಬೆಲೆ ಏರಿಕೆಯಿಂದ ಬೈಕ್, ಕಾರ್ ಬಳಕೆದಾರರ ಮೇಲೆ ಮಾತ್ರವಲ್ಲದೆ, ಉತ್ಪಾದನೆ, ಸಾರಿಗೆ ಇತರ ಕ್ಷೇತ್ರಗಳ ಮೇಲೆಯೂ ಪರಿಣಾಮ ಉಂಟಾಗಿದೆ. ಇಂಧನ ಬೆಲೆ ಏರಿಕೆಯಿಂದ ಎಲ್ಲವು ದುಬಾರಿಯಾಗಿದ್ದು, ಆರ್ಥಿಕತೆಯ ಮೇಲೆ ಬಹುದೊಡ್ಡ ಪರಿಣಾಮ ಬೀರಿವೆ. ಇದರ ನಿಯಂತ್ರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆ ಸಾಧಿಸಿ ತೆರಿಗೆಯನ್ನು ಕಡಿತಗೊಳಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ದೇಶದ ಜನ ಸಂಕಷ್ಟದ ಜೀವನ ಸಾಗಿಸುತ್ತಿದ್ದು ಅದರಿಂದ ಹೊರಬರಲು ಸರ್ಕಾರಗಳು ಸಕಾರಾತ್ಮಕ ನಿರ್ಧಾರ ಕೈಗೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.



SHARE THIS

Author:

0 التعليقات: