Thursday, 4 March 2021

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತಲಾ 10 ಕೆ.ಜಿ.ಅಕ್ಕಿ ಕೊಡುತ್ತೇವೆ ; ಸಿದ್ದರಾಮಯ್ಯ


ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತಲಾ 10 ಕೆ.ಜಿ.ಅಕ್ಕಿ ಕೊಡುತ್ತೇವೆ ; ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ.ಅಕ್ಕಿ ನೀಡುವ ಯೋಜನೆ ಜಾರಿಗೊಳಿಸುತ್ತೇವೆ' ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ.ಅಕ್ಕಿ ನೀಡುವ ಯೋಜನೆ ಜಾರಿಗೊಳಿಸುತ್ತೇವೆ'ಅವರು ರಾಜ್ಯವನ್ನು ಹಸಿವು ಮುಕ್ತ ಮಾಡಲು ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ 7 ಕೆ.ಜಿ.ಅಕ್ಕಿ ಯೋಜನೆ ಜಾರಿಗೊಳಿಸಿದರೆ ಬಿಜೆಪಿ ಸರ್ಕಾರ 5 ಕೆ.ಜಿ.ಗೆ ಇಳಿಸಿದೆ ಎಂದರು.

ನಾವು ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದೇವೆ. ಬಡವರಿಗೆ ಅಕ್ಕಿ ಯೋಜನೆ ಜಾರಿಗೆ ತಂದಿದ್ದೆವು. ರೈತರಿಗೆ ಕೃಷಿಭಾಗ್ಯ, ಪಶುಭಾಗ್ಯ ಹಾಗೂ ಬಡ ಹೆಣ್ಣುಮಕ್ಕಳಿಗೆ ಶಾದಿಭಾಗ್ಯ ಯೋಜನೆ ಸಹಿತ ಅನೇಕ ಕಾರ್ಯಕ್ರಮ ಜಾರಿಗೊಳಿಸಿದ್ದೆವು. ಕೊಟ್ಟ ಮಾತಿನಂತೆ ನಡೆದುಕೊಂಡು ಅಧಿಕಾರ ನಡೆಸಿದ್ದೇವೆ. ಆದರೆ, ಕೇಂದ್ರದಲ್ಲಿ 7 ವರ್ಷಗಳಿಂದ ಅಧಿಕಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಏನು ಮಾಡಿದೆ. ಸರ್ಕಾರ ಜನ ವಿರೋಧಿ ಧೋರಣೆ ಅನುಸರಿಸಿ ಶೋಷಣೆ ಮಾಡುತ್ತಿದೆ. ರೈತರು, ಬಡವರು, ಮಹಿಳೆಯರು, ಕೂಲಿ ಕಾರ್ಮಿಕರು ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.SHARE THIS

Author:

0 التعليقات: