Wednesday, 24 March 2021

ರಾಜ್ಯದಲ್ಲಿ 2,298 ಹೊಸ ಕೊರೋನ ಪ್ರಕರಣ ದೃಢ, 12 ಮಂದಿ ಮೃತ್ಯು


ರಾಜ್ಯದಲ್ಲಿ 2,298 ಹೊಸ ಕೊರೋನ ಪ್ರಕರಣ ದೃಢ, 12 ಮಂದಿ ಮೃತ್ಯು

ಬೆಂಗಳೂರು, ಮಾ.24: ರಾಜ್ಯದಲ್ಲಿ ಬುಧವಾರದಂದು 2,298 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 12 ಜನರು ಸೋಂಕಿಗೆ ಬಲಿಯಾಗಿದ್ದು, 995 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,75,955ಕ್ಕೆ ತಲುಪಿದ್ದು, 143 ಜನ ಸೋಂಕಿತರು ಐಸಿಯುನಲ್ಲಿದ್ದಾರೆ. 

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,461ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 16,886ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

12 ಸೋಂಕಿತರು ಬಲಿ: ಬೆಂಗಳೂರು ನಗರ 7, ಧಾರವಾಡ 1, ಕಲಬುರಗಿ 1, ಕೊಪ್ಪಳ 1, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.SHARE THIS

Author:

0 التعليقات: